Breaking News :

ಪಾಟ್ನಾ; ಪ್ರತಿಭಟನೆಯ ವೇಳೆ ಐಎಎಸ್ ಅಧಿಕಾರಿಗೆ ಲಾಠಿಯಿಂದ ಹಲ್ಲೆ ನಡೆಸಿದ ಪೊಲೀಸರು; ವಿಡಿಯೋ ವೀಕ್ಷಿಸಿ..

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ  ವಿಚಾರದಲ್ಲಿ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಇಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ. ಬಿಹಾರದಲ್ಲಿ  ಬೆಳಗ್ಗೆಯಿಂದಲೇ ಭಾರತ್ ಬಂದ್‌ ನಡೆಯುತ್ತಿದ್ದು, ಪ್ರತಿಭಟನಾಕಾರರು ಬೆಳಗ್ಗೆಯಿಂದಲೇ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಗದ್ದಲ ಸೃಷ್ಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಲಾಠಿ ಚಾರ್ಜ್ ಸಂದರ್ಭದಲ್ಲಿ, ಪಾಟ್ನಾ ಸದರ್ ಎಸ್‌ಡಿಎಂ ಮೇಲೆ ಪೊಲೀಸರು ಆಕಸ್ಮಿಕವಾಗಿ ಲಾಠಿಯಿಂದ ಹೊಡೆದಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. […]

ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕುಮಾರಸ್ವಾಮಿಯನ್ನು ಬಂಧಿಸುತ್ತೇವೆ; ಸಿಎಂ ಸಿದ್ದರಾಮಯ್ಯ

ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊಪ್ಪಳದ ಬಸಾಪೂರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸದ್ಯಕ್ಕೆ ಕುಮಾರಸ್ವಾಮಿಯನ್ನು ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿ ಮೇಲೆ ಈಗಾಗಲೇ ಲೋಕಾಯುಕ್ತ ಹಾಗೂ ಎಸಿಬಿ ಸಂಸ್ಥೆಗಳು ತನಿಖೆ ಮಾಡಿವೆ. ಕುಮಾರಸ್ವಾಮಿ ವಿರುದ್ಧ ಸಾಕಷ್ಟು ದಾಖಲೆ ಸಿಕ್ಕಿವೆ. ಈ ಹಿನ್ನೆಲೆ ಲೋಕಾಯುಕ್ತ ಸಂಸ್ಥೆ ಪ್ರಾಸಿಕ್ಯೂಷನ್ ಗೆ ಪರವಾನಗಿ ನೀಡುವಂತೆ ರಾಜ್ಯಪಾಲರನ್ನು ಕೇಳಿದ್ದಾರೆ. ಕುಮಾರಸ್ವಾಮಿಗೆ ಭಯ ಬಂದಿದೆ. […]

ನನ್ನ ತಂದೆಯನ್ನು ಜೈಲಿಗೆ ಕಳಿಸಿ ಎಂದು ಪೊಲೀಸ್ ಠಾಣೆಗೆ ತೆರಳಿ ದೂರು ಕೊಟ್ಟ 5 ವರ್ಷದ ಬಾಲಕ!

5 ವರ್ಷದ ಬಾಲಕನೊಬ್ಬ ತನ್ನ ತಂದೆಯ ವಿರುದ್ಧ ಎಫ್‌ಐಆರ್ ದಾಖಲಿಸಲು ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ತಂದೆ ನದಿಗೆ ಹೋಗದಂತೆ ಮತ್ತು ರಸ್ತೆಯಲ್ಲಿ ಆಟವಾಡದಂತೆ ತಡೆಯುತ್ತಾರೆಂದು ಮುಗ್ಧ ಬಾಲಕ ಪೊಲೀಸ್ ಠಾಣೆಗೆ ತೆರಳಿ ಎಫ್‌ಐಆರ್ ದಾಖಲಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.     <script async src=”https://pagead2.googlesyndication.com/pagead/js/adsbygoogle.js?client=ca-pub-4685621585864602″ crossorigin=”anonymous”></script> <!– Ads 1 –> <ins class=”adsbygoogle” style=”display:block” data-ad-client=”ca-pub-4685621585864602″ data-ad-slot=”6927469720″ data-ad-format=”auto” data-full-width-responsive=”true”></ins> <script> (adsbygoogle […]

ಕೃತ್ಯಕ್ಕೆ ಮೊದಲು ಎರಡು ವೇಶ್ಯಾಗೃಹಗಳಿಗೆ ತೆರಳಿದ್ದ!; ಕಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯ ವೇಳೆ ಮತ್ತಷ್ಟು ಮಾಹಿತಿ ಬಯಲು

ನಗರದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಬರ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿಯೊಂದು ಬಯಲಾಗಿದ್ದು, ಕೃತ್ಯಕ್ಕೆ ಮೊದಲು ಕಾಮುಕ ಹಿಂದಿನ ದಿನ ರಾತ್ರಿ ನಗರದ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎನ್ನುವುದು ಬಯಲಾಗಿದೆ ಆರೋಪಿ ಸಂಜಯ್ ರಾಯ್ ಆಗಸ್ಟ್ 8ರ ರಾತ್ರಿ ಕೋಲ್ಕತಾದ ಸೋನಾಗಚಿ ರೆಡ್ ಲೈಟ್ ಏರಿಯಾದಲ್ಲಿದ್ದ. ಅಲ್ಲಿ ಆತ ಮದ್ಯ ಸೇವಿಸಿ ಎರಡು ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜೂನಿಯರ್ ಡಾಕ್ಟರ್ ಮಲಗಿದ್ದ ಆರ್‌ಜಿ ಕರ್ […]

ಬೆಳ್ತಂಗಡಿ; ಮಾರಕಾಸ್ತ್ರದಿಂದ ಕೊಚ್ಚಿ ನಿವೃತ ಶಿಕ್ಷಕನ ಬರ್ಬರ ಹತ್ಯೆ

ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಬಂಟ್ವಾಳ; ಡೆತ್ ನೋಟು ಬರೆದಿಟ್ಟು ಶಾಲಾ ಬಾಲಕ ಆತ್ಮಹತ್ಯೆ

ಬಂಟ್ವಾಳ; ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟ‌ನೆ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ನಡೆದಿದೆ. ಸಾಯಿಶಾಂತಿ ಎಂಬವರ ಪುತ್ರ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಂಜಾನೆ 5 ಗಂಟೆ ಹೊತ್ತಿಗೆ ಕೆರೆ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೆ ಮುನ್ನ ಬಾಲಕ ಡೆತ್ ನೋಟು ಬರೆದಿಟ್ಟಿದ್ದಾನೆ ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಹಪಾಠಿಯಿಂದ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

ಸಹಪಾಠಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉದಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ದೇವರಾಜ್ (15)​ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್​ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಸಹಪಾಠಿ ವಿದ್ಯಾರ್ಥಿ ದೇವರಾಜ್ ಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭಿರವಾಗಿ ಗಾಯಗೊಂಡಿದ್ದ ಬಾಲಕನನ್ನು […]

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಹಲವು ಶಾಕಿಂಗ್ ಅಂಶಗಳು ಉಲ್ಲೇಖ

ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದೆ. ಕೋಲ್ಕತ್ತದ ಆರ್​ಜಿ ಕರ್​ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆಯ ದೇಹದಲ್ಲಿ ತುಂಬಾ ಗಾಯಳಾಗಿದ್ದು, ಅವೆಲ್ಲವೂ ಆಕೆ ಸಾಯುವ ಮೊದಲೇ ಆಗಿದೆ ಎಂದು ಮರಣೋತ್ತರ ಪರೀಕ್ಷೆ ವರದಿ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ‌ ಮಾಡಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸಂತ್ರಸ್ತೆಯ ಗುಪ್ತಾಂಗ, ತೋಳು, ಕುತ್ತಿಗೆ, ಮುಖ ಮತ್ತು ತಲೆಯಲ್ಲಿ ಸುಮಾರು 14ಕ್ಕೂ ಹೆಚ್ಚು […]

ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ಆದೇಶ ನೀಡುವಂತಿಲ್ಲ; ಸಿದ್ದರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ಕೋರ್ಟ್ ನಲ್ಲಿ ವಾದ

ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ವೇಳೆ ಮಾತನಾಡಿದ ಹಿರಿಯ ವಕೀಲ ಮನು ಸಿಂಘ್ವಿ , ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು. ರಾಜ್ಯಪಾಲರಿಗೆ […]

ತಾಯಿಯ ಮೃತದೇಹ ಮುಂದಿಟ್ಟು ಬಿಕ್ಷೆ ಬೇಡಿದ ಬಾಲಕಿ; ಹೃದಯವಿದ್ರಾಹಕ ಘಟನೆಯ ವಿಡಿಯೋ ವೈರಲ್

ಅಪ್ರಾಪ್ತ ಬಾಲಕಿಯೋರ್ವಳು ಮೃತ ತಾಯಿಯ ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೆ ತಾಯಿಯ ಮೃತ ದೇಹ ಮುಂದಿಟ್ಟು ಕುಳಿತು ಭಿಕ್ಷೆ ಬೇಡಿದ ಹೃದಯವಿದ್ರಾಹಕ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ತನೂರ್ ಮಂಡಲದಲ್ಲಿರುವ ಭೇಲ್ ತರೋಡಾ ಗ್ರಾಮದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಭಿಕ್ಷೆ ಬೇಡುತ್ತಿರುವ ಮತ್ತು ತನ್ನ ತಾಯಿಯ ಅಂತ್ಯಕ್ರಿಯೆಗೆ ಹಣವನ್ನು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವು ತಿಂಗಳ ಹಿಂದೆ ದುರ್ಗಾ ಅವರ ತಂದೆ ಅನಾರೋಗ್ಯದಿಂದ ನಿಧನರಾಗಿದ್ದರು, ಬಳಿಕ ತಾಯಿ ಗಂಗಾಮಣಿ ತನ್ನ ಚಿಕ್ಕ […]