ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಸಿಎಂ ಇಬ್ರಾಹಿಂ ವಾಗ್ಧಾಳಿ

ಮೂಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಕೆಂಡಾಮಂಡಲರಾಗಿದ್ದು, ರಾಜ್ಯಪಾಲರು ಕುಮಾರಸ್ವಾಮಿ ಮನೆಯ ಕ್ಲರ್ಕಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಾಮಾನ್ಯ ಮನುಷ್ಯನ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರದ ವಿರುದ್ಧ ನಾನು ಪ್ರತಿಭಟನೆ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ಟಗರು ಇದ್ದಂತೆ ಧೈರ್ಯ ಹೇಳಿದ್ದೇನೆ. ಮೊದಲು ಸಿಎಂ ಜೊತೆಯಲ್ಲಿ ನಾನು ಇರಲಿಲ್ಲ. ಆದರೆ ಈಗ ಅವರ ಜೊತೆಯಲ್ಲಿ ಇರುತ್ತೇನೆ […]
ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಓರಮ್ ಅಂತ್ಯಕ್ರಿಯೆಯು ಸುಂದರ್‌ಗಢ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ […]
ಗ್ರಾಹಕರೇ ಎಚ್ಚರ! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ! ಏನಿದು ಪ್ರಕರಣ?

ನಕಲಿ ಬೆಳ್ಳುಳ್ಳಿ ಮಾರಾಟ ಮಾಡುವ ಪ್ರಕರಣ ಮಹಾರಾಷ್ಟ್ರದ ಅಕೋಲಾದಲ್ಲಿ ಬೆಳಕಿಗೆ ಬಂದಿದೆ. ಅಕೋಲಾದಲ್ಲಿ ಬೆಳ್ಳುಳ್ಳಿಯ ಬದಲು ವ್ಯಾಪಾರಿಯೊಬ್ಬರು ಸಿಮೆಂಟ್ ಬೆಳ್ಳುಳ್ಳಿ ಮಾರಾಟ ಮಾಡಿರುವ ಆರೋಪ ಕೇಳಿ ಬಂದಿದೆ. ಸದ್ಯ ಈ ಸುದ್ದಿ ವೈರಲ್ ಆಗುತ್ತಿದ್ದು, ನಾಗರೀಕರು ಮಾರಾಟಗಾರರ ವಿರುದ್ಧ ಧ್ವನಿ ಎತ್ತಿದ್ದಾರೆ. ಅದೇ ರೀತಿ ಜನರಿಗೂ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಇನ್ನು ಸಿಮೆಂಟ್ ಬೆಳ್ಳುಳ್ಳಿಯನ್ನು ಬೇರ್ಪಡಿಸಲು ಪ್ರಯತ್ನಿಸಿದಾಗ ನಕಲಿ ಎಂದು ಬಯಲಾಗಿದೆ. ಚಾಕುವಿನಿಂದ ಕತ್ತರಿಸಿದಾಗ ಅದು ಸಿಮೆಂಟ್ನಿಂದ ಮಾಡಿದ ಬೆಳ್ಳುಳ್ಳಿ ಎಂದು ಬೆಳಕಿಗೆ ಬಂದಿದೆ. ಅಕೋಲಾದಲ್ಲಿ […]
ಜನರಿಂದ ವಸೂಲಿ ಮಾಡಿದ ಹಣವನ್ನು ಹಂಚಿಕೆ; ಟ್ರಾಫಿಕ್ ಪೊಲೀಸರ ಕಳ್ಳಾಟದ ವಿಡಿಯೋ ವೈರಲ್

ಪೊಲೀಸರ ಕಳ್ಳಾಟವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಸಾಗುವ ವಾಹನ ಸವಾರರ ಹಿಡಿದು ದಂಡ ಹಾಕಿ ತಮ್ಮ ಜೇಬು ತುಂಬಿಸಿಕೊಂಡಿದ್ದಾರೆ. ವಾಹನ ಸವಾರರಿಂದ ಸ್ವೀಕರಿಸಿದ ಲಂಚದ ಹಣವನ್ನು ಮೂವರು ಪೊಲೀಸರು ಸಮನಾಗಿ ಹಂಚಿದ್ದಾರೆ. ಈ ದೃಶ್ಯ ಪಕ್ಕದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಿಣಾಮ ಈ ಮೂವರು ಟ್ರಾಫಿಕ್ ಪೊಲೀಸರು ಸೇವೆಯಿಂದ ಅಮಾನತ್ತಾದ ಘಟನೆ ದೆಹಲಿಯಲ್ಲಿ ನಡೆದಿದೆ. ಘಾಝಿಪುರದ ಥ್ರಿಲ್ ಲೌರಿ ಸರ್ಕಲ್ ಪೊಲೀಸ್ ಚೌಕಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಈ ರಸ್ತೆಯಲ್ಲಿ ಸಾಗುವ ವಾಹನ ಸವಾರರನ್ನು ನಿಯಮ ಉಲ್ಲಂಘನೆ ನೆಪದಲ್ಲಿ ಹಣ […]
ಹಿರಿಯ ನಟ ಮೋಹನ್ ಲಾಲ್ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಸೇರಿದಂತೆ ರೋಗಲಕ್ಷಣಗಳಿಂದಾಗಿ ಹಿರಿಯ ನಟ ಮೋಹನ್ ಲಾಲ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ವೈರಲ್ ಉಸಿರಾಟದ ಸೋಂಕು ಇದೆ ಎಂದು ಶಂಕಿಸಲಾಗಿದೆ ಮೋಹನ್ ಲಾಲ್ ಅವರಿಗೆ ಐದು ದಿನಗಳವರೆಗೆ ಸಾರ್ವಜನಿಕ ಸಂವಹನಗಳನ್ನು ತಪ್ಪಿಸಲು ಮತ್ತು ಸೂಚಿಸಿದ ಔಷಧಿ ನಿಯಮವನ್ನು ಅನುಸರಿಸಲು ಸೂಚಿಸಲಾಗಿದೆ. ಎಲ್ 2: ಎಂಪುರಾನ್’ ಚಿತ್ರೀಕರಣ ಮತ್ತು ತಮ್ಮ ಚೊಚ್ಚಲ ನಿರ್ದೇಶನದ ‘ಬರೋಜ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಮುಗಿಸಿದ […]
ಪ್ರಾಸಿಕ್ಯುಷನ್ ಗೆ ಅನುಮತಿ: ರಾಜ್ಯಪಾಲರ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನೆಲ್ಲಾ ಹೇಳಿದ್ರು?

ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯುಷನ್ ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿಯನ್ನು ನಡೆಸಿದ್ದಾರೆ. ಗೌರವಾನ್ವಿತ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ನನ್ನ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಟ್ಟ ಪಿತೂರಿಯಲ್ಲದೆ ಬೇರೇನೂ ಅಲ್ಲ. ಇದು ಪ್ರಜಾಪ್ರಭುತ್ವಕ್ಕೆ ನೇರ ಬೆದರಿಕೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯಪಾಲರನ್ನು ಬಿಜೆಪಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನನ್ನ ರಾಜೀನಾಮೆಗೆ ಒತ್ತಾಯಿಸಲು ಅವರಿಗೆ ಯಾವುದೇ […]
ಕಾಸರಗೋಡಿನಲ್ಲಿ ಭೀಕರ ಅಪಘಾತ; ಮಂಗಳೂರು ಕಾಲೇಜು ವಿದ್ಯಾರ್ಥಿ ಮೃತ್ಯು

ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು. ಇನ್ನು ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ […]
ಸಿದ್ದರಾಮಯ್ಯ ಮಾಸ್ ಲೀಡರ್; ಪ್ರಾಸ್ಯುಕ್ಯೂಷನ್ ಗೆ ಅನುಮತಿ ಬಗ್ಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಏನೆಲ್ಲಾ ಹೇಳಿದ್ರು ಗೊತ್ತಾ?

ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಾಪಾಲರು ಪ್ರಾಸಿಕ್ಯುಷನ್ ಗೆ ಅನುಮತಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಈ ಕುರಿತು ಮಾತನಾಡಿರುವ ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯರನ್ನು ಮಾಸ್ ಲೀಡರ್ ಎಂದು ಕರೆದಿದ್ದಾರೆ. ಬೆಳಗಾವಿ ನಗರದಲ್ಲಿ ಈ ಕುರಿತು ಮಾತನಾಡಿದ ರಮೇಶ್, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕುರಿತು ನಾನು ಮಾತನಾಡುವುದಿಲ್ಲ. ನಮ್ಮ ಪಕ್ಷ ಎನೂ ನಿರ್ಧಾರ ತೆಗೆದುಕೊಳ್ಳುತ್ತೆ ಅದಕ್ಕೆ ನಾನು ಬದ್ಧ. ಕೆಲವೊಂದು […]
ಸಿದ್ದರಾಮಯ್ಯಗೆ ಅಭಯ ನೀಡಿದ ಕಾಂಗ್ರೆಸ್ ಹೈಕಮಾಂಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸ್ಯುಕ್ಯೂಷನ್ ಗೆ ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲಿ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, […]
ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ; ಪ್ರಾಸಿಕ್ಯೂಷನ್ ಗೆ ಕಾನೂನು ತಡೆಯಾಜ್ಞೆ ತರದಂತೆ ಹೈಕೋರ್ಟ್ ಗೆ ಕೇವಿಯಟ್ ಸಲ್ಲಿಕೆ

ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ತಡೆಯಾಜ್ಞೆ ನೀಡದಂತೆ ದೂರುದಾರರು ಹೈಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ. ದೂರುದಾರ ಪ್ರದೀಪ್ ಕುಮಾರ್ ಎಂಬುವವರು ಸಿಎಂ ಸಿದ್ದರಾಮಯ್ಯ ಕಾನೂನು ತಡೆಯಾಜ್ಞೆ ತರಬಾರದು ಎಂಬ ಕಾರಣಕ್ಕೆ ಹೈಕೋರ್ಟ್ ಗೆ ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿದ ಪ್ರದೀಪ್ ಕುಮಾರ್, ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು […]