Breaking News :

BIG NEWS ಮೂಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರು

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ವರದಿಯಾಗಿದೆ. ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಇತ್ತೀಚೆಗೆ ದೂರು ದಾಖಲಾಗಿತ್ತು. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ […]

ಮಹಾರಾಷ್ಟ್ರ; ಪ್ರವಾದಿ ಬಗ್ಗೆ ಅವಹೇಳನ ಮಾಡಿದವನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ, ಉದ್ವಿಗ್ನ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಶುಕ್ರವಾರ ಮುಸ್ಲಿಮರ ಗುಂಪು ಸಿಟಿ ಚೌಕ್ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಪ್ರವಾದಿ ಮೊಹಮ್ಮದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ರಾಮಗಿರಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ಬಳಿಕ ಪರಿಸ್ಥಿತಿ ಉದ್ವಿಗ್ನವಾಗಿದೆ. ಪೊಲೀಸರು ಗುಂಪನ್ನು ಸಮಾಧಾನ ಪಡಿಸಲು ಯತ್ನಿಸಿದರು. ಶಾಂತಿ ಕಾಪಾಡುವಂತೆ ನಗರ ಚೌಕ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಿರ್ಮಲಾ ಪರದೇಶಿ ಮನವಿ ಮಾಡಿದರು. ಅವರ ಬೇಡಿಕೆಯಂತೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಪೊಲೀಸರು ರಾಮಗಿರಿ […]

ಜಮ್ಮು-ಕಾಶ್ಮೀರ, ಹರ್ಯಾಣ ವಿಧಾನಸಭೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಹೊಸದಿಲ್ಲಿ: ಚುನಾವಣಾ ಆಯೋಗವು ಇಂದು ಜಮ್ಮು & ಕಾಶ್ಮೀರ, ಹರ್ಯಾಣ ರಾಜ್ಯಗಳ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಿಸಿದೆ. ಹರಿಯಾಣದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಹರಿಯಾಣದಲ್ಲಿ 90 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 73 ಜನರಲ್, ಎಸ್ಸಿ 17 ಕ್ಷೇತ್ರಗಳಿದೆ. ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. 90 ಕ್ಷೇತ್ರಗಳಿಗೆ 3 ಹಂತಗಳಲ್ಲಿ ಮತದಾನವನ್ನು ನಡೆಸುತ್ತಿರುವುದಾಗಿ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗದಿಂದ ಘೋಷಣೆ […]

ವಯನಾಡಿನಲ್ಲಿ ದಿಟ್ಟ ಸೇವೆ: ತಮಿಳುನಾಡು ನರ್ಸ್ ಎ.ಸಬೀನಾಗೆ ಕಲ್ಪನಾ ಚಾವ್ಲ ಪ್ರಶಸ್ತಿ

ಈ ಬಾರಿಯ ‘ಕಲ್ಪನಾ ಚಾವ್ಲ ಪ್ರಶಸ್ತಿ’ಯನ್ನು ತಮಿಳುನಾಡಿನ ನೀಲಗರಿ ಜಿಲ್ಲೆಯ ನರ್ಸ್ ಎ.ಸಬೀನಾ ಅವರಿಗೆ ನೀಡಲಾಗಿದೆ. ಕೇರಳದ ವಯನಾಡ್ ನಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಧೈರ್ಯ ಮತ್ತು ಸಾಹಸದಿಂದ ಹಲವು ಜೀವಗಳನ್ನು ರಕ್ಷಿಸಿದ್ದನ್ನು ಪರಿಗಣಿಸಿ ಈ ಪ್ರಶಸ್ತಿಗೆ ಸಬೀನಾ ಅವರನ್ನು ಆಯ್ಕೆ ಮಾಡಲಾಗಿದೆ. ಭೂಕುಸಿತದಿಂದಾಗಿ ಮುಂಡಕೈ-ಸುರಲ್ಮಲೈ ನಡುವಿನ ಸಂಪರ್ಕ ಸೇತುವೆ ಹಾನಿಗೀಡಾಗಿ ಕ್ರಮೇಣ ಕುಸಿದಿತ್ತು. ಇದರಿಂದಾಗಿ ಜನ ಅತಂತ್ರರಾಗಿ, ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ ಹಾಗೂ ಪರಿಹಾರ ಕಾರ್ಯಾಚರಣೆ ಕೂಡಾ ದುಸ್ತರವಾಗಿತ್ತು.ಪರಿಹಾರ ಮತ್ತು ರಕ್ಷಣಾ […]

ಮಾಜಿ ಕಾರ್ಪೊರೇಟರ್ ಮೇಲೆ‌ ತಂಡದಿಂದ ಹಲ್ಲೆ

ಮಾಜಿ ಕಾರ್ಪೊರೇಟರ್ ಓರ್ವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ ತಂಡವೊಂದು ದಾಳಿ ನಡೆಸಿದೆ. ಈ ವೇಳೆ ಸತೀಶ್ ಅಲ್ಲಿಂದ ತಪ್ಪಿಸಿಕೊಂಡು ತೆರಳಿದ್ದಾರೆ. […]

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಹುಲ್ ಗಾಂಧಿಯ ಕಡೆಗಣನೆ?

ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಸಮಾರಂಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು  ಐದನೇ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಇದಕ್ಕೆ ಒಲಂಪಿಕ್ಸ್ ಆಟಗಾರರಿಗೆ ಸ್ಥಾನ ನೀಡಲು ಈ ರೀತಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇದರಿಂದಾಗಿ ಕೆಲವು ಕೇಂದ್ರ ಸಚಿವರನ್ನು ಹಿಂದಿನ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಹೇಳಿದೆ. ರಾಹುಲ್ ಗಾಂಧಿ ಅವರು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರ್ರಿ ಪಕ್ಕದಲ್ಲಿ ಕುಳಿತಿದ್ದರು. ಇದಕ್ಕೆ ಕಾಂಗ್ರೆಸ್ […]

ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡ ಎಂಪಾಕ್ಸ್  ವೈರಸ್: ಮನುಷ್ಯನಿಂದ ಮನುಷ್ಯನಿಗೆ ಹರಡುವ ಈ ವೈರಸ್ ಬಗ್ಗೆ ಜಗತ್ತಿಗೆ ಹೆಚ್ಚಿದ ಭೀತಿ

ಎಂಪಾಕ್ಸ್  ವೈರಸ್ ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡಿದೆ. ಈ ಹಿಂದೆ ಮಂಕಿಪಾಕ್ಸ್ ಎಂದು ಕರೆಯಲ್ಪಡುವ ಈ ವೈರಸ್ ವೇಗವಾಗಿ ಹರಡುವ ಕಾಯಿಲೆಯಾಗಿದ್ದು, ಇದನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ  ಎಂದು ಘೋಷಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಚರ್ಚೆ ನಡೆಸುತ್ತಿದೆ. ಆಫ್ರಿಕನ್ ದೇಶಗಳಲ್ಲಿ ಎಂಪಾಕ್ಸ್ ವೈರಸ್‌ನ ಮಾರಣಾಂತಿಕ ರೂಪಾಂತರದ ಪ್ರಕರಣಗಳ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಬುಧವಾರ ಅಂತರಾಷ್ಟ್ರೀಯ ತಜ್ಞರ ತುರ್ತು ಸಭೆ ಕರೆದಿದ್ದರು. Mpox ವೈರಸ್ ಎಂದರೇನು? ಮಂಕಿಪಾಕ್ಸ್ ಎಂದು […]

ಮದುವೆಯಾಗಿ ಒಂದೇ ದಿನದಲ್ಲಿ ಚಿನ್ನ, ನಗದು ಎಗರಿಸಿ ಪರಾರಿಯಾಗುತ್ತಿದ್ದ ಖತರ್ನಾಕ್ ಮ್ಯಾರೇಜ್ ಗ್ಯಾಂಗ್ ಅರೆಸ್ಟ್

ಗ್ರಾಮೀಣ ಭಾಗದ ಯುವಕರನ್ನು ಟಾರ್ಗೆಟ್‌ ಮಾಡಿಕೊಂಡು ಮದುವೆ ಹೆಸರಿನಲ್ಲಿ ಮೋಸ ಮಾಡುತ್ತಿದ್ದ ಖತರ್ನಾಕ್‌ ಗ್ಯಾಂಗ್‌ಅನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮದುಮಗಳು ಮೂರು ವರ್ಷದಲ್ಲಿ ನಾಲ್ಕು ಮದುವೆ ಆಗಿದ್ದಾಳೆ. ಮದುವೆಯಾಗಿದ್ದ ವಂಚಕ ಜಾಲವನ್ನು ಗುಬ್ಬಿ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ. ತಾಲ್ಲೂಕಿನ ಲಕ್ಷ್ಮೀ ಬಾಳಸಾಬ್‌ ಜನಕರ್‌ ಅಲಿಯಾಸ್‌‍ ಕೋಮಲ, ಸಿದ್ದಪ್ಪ , ಲಕ್ಷ್ಮೀಬಾಯಿ, ಬ್ರೋಕರ್‌ ಲಕ್ಷ್ಮಿ ಬಂಧಿತರು. ಅತ್ತಿಗಟ್ಟೆ ಪಾಲಾಕ್ಷ ಎಂಬುವವರು ತಮ್ಮ ಮಗನಿಗೆ ಮದುವೆ ಮಾಡಿಸಲು ಹೆಣ್ಣು ಹುಡುಕುತ್ತಿದ್ದರು. ಹತ್ತಾರು ಮದುವೆ ಬ್ರೋಕರ್‌ ಮೂಲಕ ಹೆಣ್ಣು ಹುಡುಕಿಸಿದ್ದರೂ ಮದುವೆ […]

ವಯನಾಡು ಭೂಕುಸಿತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಪಿಣರಾಯ್ ವಿಜಯನ್

ವಯನಾಡ್ ಭೂಕುಸಿತ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ ಆರು ಲಕ್ಷ ರೂಪಾಯಿ ಪರಿಹಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು  ಘೋಷಿಸಿದ್ದಾರೆ. ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಮುಖ್ಯಮಂತ್ರಿಗಳ ವಿಪತ್ತು […]

ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾಗೆ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಆಹ್ವಾನ

ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರನ್ನು ಆಹ್ವಾನಿಸಲಾಗಿದ್ದು ವಿಶೇಷ ಅತಿಥಿಯಾಗಿ ಅವರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೆರುವಾಯಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನಫೀಸಾ ಅವರು ಹಿಂದಿನ ಅವಧಿಯಲ್ಲಿ ಎರಡೂವರೆ ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತ್ಯಾಜ್ಯ ವಿಲೇವಾರಿ ವಾಹನವನ್ನು ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ಗಮನ ಸೆಳೆದಿದ್ದ ಅವರು ಅನೇಕ ಗೌರವಗಳನ್ನು ಸ್ವೀಕರಿಸಿದರು. […]