Breaking News :

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

  ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

  ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]

ಕಾಫಿ ತೋಟಗಳ ನಡುವೆ ಶರ ವೇಗದಲ್ಲಿ ಪೈಪೋಟಿ ನೀಡಿದ ರ್‍ಯಾಲಿ ಪಟುಗಳು – ಕಾರುಗಳ  ಪೈಪೋಟಿಗೆ ಪ್ರೇಕ್ಷಕರು ಫುಲ್ ಫಿದಾ 

ಚಾಲನೆ ಸಂದರ್ಭ ಪಲ್ಟಿಯಾದ ಎರಡು ಕಾರು – 2ನೇ ದಿನ ತಾಂತ್ರಿಕ ದೋಷದಿಂದ ಹೊರಗುಳಿದ 10ಕ್ಕೆೊ ಹೆಚ್ಚು ಕಾರುಗಳು ಜನವಾಹಿನಿ News ಮಡಿಕೇರಿ :  ಬ್ಲೂ ಬ್ಯಾಂಡ್  ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಶಿಪ್ ನೇತೃತ್ವದಲ್ಲಿ  ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಾಹಕಾರದೊಂದಿಗೆ ರೋಬಸ್ಟಾ 2025 ರ್‍ಯಾಲಿಯು ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ  ಸಂಚರಿಸಿ  ಗುರಿ ಮುಟ್ಟಲು ಅರಸಹಾಸ ಪಟ್ಟಲು.  ನಿಗದಿತ ಸಮಯ ಮುಟ್ಟಲು ತಾ ಮುಂದು ನಾ ಮುಂದು ಎಂಬಂತೆ   ಕಾರುಗಳು ಸರವೇಗದಲ್ಲಿ […]

ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಜನವಾಹಿನಿ News ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ, ಸಾಲು ಮರದ ತಿಮ್ಮಕ್ಕ ಇನ್ನಿಲ್ಲ. 114 ವರ್ಷ ವಯಸ್ಸಾಗಿದ್ದ ಸಾಲು ಮರದ ತಿಮ್ಮಕ್ಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ತಿಮ್ಮಕ್ಕ ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು […]

ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ – ವಿವಿಧ ಕಡೆ ಶೋಧ ಕಾರ್ಯ 

  ಜನವಾಹಿನಿ News ಮಡಿಕೇರಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ರಾಜ್ಯದ ಎಲ್ಲಾ ನಗರಗಳಲ್ಲಿ ತಪಾಸಣೆ, ಗಸ್ತು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆ ಕೊಡಗಿನ ಜನನಿಬಿಡ ಪ್ರದೇಶಗಳಲ್ಲಿ, ಸರ್ಕಾರಿ ಬಸ್ಸು ನಿಲ್ದಾಣ, ರಾಜಾಸೀಟು ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದು, ವಿಶೇಷ ನಿಗಾ ವಹಿಸಲಾಗಿದೆ. ಮಡಿಕೇರಿ ಬಸ್ಸು ನಿಲ್ದಾಣದಲ್ಲಿದ್ದ […]

ರಣ ಭೀಕರ ಮಳೆಗೆ ಉತ್ತರ ಭಾರತ ತತ್ತರ : 30ಕ್ಕೂ ಅಧಿಕ ಮಂದಿ ಸಾವು 

  ಜನವಾಹಿನಿ NEWS ನವದೆಹಲಿ : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ರಾಜಧಾನಿಯ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಯಮುನಾ ನದಿ ನೀರಿನ ಮಟ್ಟವು 206.83 ಮೀಟರ್‌ ದಾಖಲಾಗಿದೆ. ನಿವಾಸಿಗಳ ಪರದಾಟ ಬುಧವಾರವೂ ಮುಂದುವರಿದಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ರಕ್ಷಿಸಲಾಗಿದ್ದರೂ ಕೆಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಜೀರಾಬಾದ್‌ ಮತ್ತು ಹತ್ನಿಕುಂಡ್‌ ಬ್ಯಾರೇಜ್‌ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ನೀರಿನ ಮಟ್ಟ […]

ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ 

  ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]

ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ  ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ 

    ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ  ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಮಡಿಕೇರಿ : ಈಶ ಫೌಂಡೇಶನ್ ವತಿಯಿಂದ 17ನೇ ಆವೃತ್ತಿಯ ಈಶ ಗ್ರಾಮೋತ್ಸವ ಅಂಗವಾಗಿ ರೂರಲ್ ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಈಶ ಫೌಂಡೇಶನ್‌ನ ಸ್ವಯಂ ಸೇವಕ ಎಂ.ಎನ್.ಅಖಿಲ್, ಆ.24ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೊದಲ ಹಂತದಲ್ಲಿ(ಕ್ಲಸ್ಟರ್ ವಿಭಾಗ) ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿದೆ. […]

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. 

    ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]

ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ

    ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆಯಲು ದೇಶವು ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ೭೯ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯು ನಮ್ಮನ್ನು ಹೇಗೆ […]