Breaking News :

ಹಿರಿಯ ನಟ-ನಿರ್ದೇಶಕ ಭಾರತಿರಾಜ ಇನ್ನಿಲ್ಲ

  ಜನವಾಹಿನಿ NEWS ಚೆನ್ನೈ  : ತಮಿಳು ಚಿತ್ರರಂಗದಲ್ಲಿ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ ಮತ್ತು ನಟನಾಗಿ ಜನಪ್ರಿಯರಾಗಿದ್ದ ಭಾರತಿರಾಜ ಅವರಿಂದು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ದೇಶಕರಿಗೆ 84 ವರ್ಷ ವಯಸ್ಸಾಗಿತ್ತು. ಪುತ್ರ, ತಮಿಳು ನಟ – ನಿರ್ದೇಶಕ ಮನೋಜ್ ಭಾರತಿರಾಜ 2025ರ ಮಾರ್ಚ್ 25ರಂದು ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದ ಒಂದು ವರ್ಷದ ಬಳಿಕ ಈ ದುರಂತ ಸಂಭವಿಸಿದೆ. ಭಾರತಿರಾಜ ಅವರನ್ನು ಸುಮಾರು 6 ತಿಂಗಳ ಹಿಂದೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಗಳು […]

ನಾಳೆ ವಿಶ್ವ ಪರಿಸರ ದಿನಾಚರಣೆ 

  ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ವಕೀಲರ ಸಂಘ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್, 05 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ […]

ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

  ಜನವಾಹಿನಿ NEWS ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜಭವನದ ಗಾಜಿನ ಮನೆಯಲ್ಲಿಂದು ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಡಿ.ಕೆ.ಶಿವಕುಮಾರ್ ಅವರು ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ ಪರಮೇಶ್ವರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ […]

ಸಿದ್ದಾಪುರ ವಿಜಯ್ ಅಭಿಮಾನಿಗಳಿಂದ ಸಂಭ್ರಮಾಚರಣೆ

  ಜನವಾಹಿನಿ News ಸಿದ್ದಾಪುರ : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಐತಿಹಾಸಿಕ ಜಯಗಳಿಸುವುದರೊಂದಿಗೆ ಕಾಂಗ್ರೆಸ್ ಮತ್ತಿತರ ಮಿತ್ರ ಪಕ್ಷಗಳ ಬೆಂಬಲದೊಂದಿಗೆ ನಟ-ರಾಜಕಾರಣಿ ಸಿ.ಜೋಸೆಫ್ ವಿಜಯ್ ಅವರು ಮೇ 10ರಂದು ಭಾನುವಾರ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ಐತಿಹಾಸಿಕ ಕ್ಷಣವನ್ನು ಸಿದ್ದಾಪುರದಲ್ಲೂ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ವಿಜಯ್ ಪರ ಜಯ ಘೋಷಗಳನ್ನು ಕೂಗುವ ಮೂಲಕ ಸಂಭ್ರಮಿಸಿದರು. ಈ […]

ಜಿಲ್ಲಾಡಳಿತದಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ : ಸೇನಾ ಕ್ಷೇತ್ರದಲ್ಲಿ ಜನರಲ್ ತಿಮ್ಮಯ್ಯ ಅವರ ಸಾಹಸ, ಸಾಧನೆ ಅಪಾರ: ಎ.ಎಸ್.ಪೊನ್ನಣ್ಣ

  ಜನವಾಹಿನಿ News  ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ದೀಪ ಬೆಳಗಿ, ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕರು […]

ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಕಡ್ಡಾಯ : ಇಂದೇ ಮಾಹಿತಿ ಅಪ್ಡೇಟ್ ಮಾಡಿಸಿ ತಪ್ಪಿದಲ್ಲಿ, ಮತದಾನದ ಹಕ್ಕನ್ನೇ ಕಳೆದುಕೊಳ್ಳುವಿರಿ ಹುಷಾರ್…!

ಜನವಾಹಿನಿ News ಮಡಿಕೇರಿ : ಚುನಾವಣಾ ಆಯೋಗವು ನಡೆಸುವ ಈ ಪರಿಷ್ಕರಣೆ ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಕಡ್ಡಾಯ. ಯಾರಿಗೆ ಅನ್ವಯ: ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದುಹಾಕುವಿಕೆಗಾಗಿ ಇದು ಅನ್ವಯಿಸುತ್ತದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಅಪ್ಡೇಟ್ ಮಾಡುತ್ತಾರೆ. ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಆಗುವುದರಿಂದ ಪ್ರತಿಯೊಬ್ಬ ಮತದಾರರು ಪರಿಶೀಲನೆಗೆ ಸಹಕರಿಸುವುದು ಮುಖ್ಯ.ಇದು ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ, ಹೊಸ ಮತದಾರರು ಸೇರ್ಪಡೆಗೊಳ್ಳಲು […]

ಮೀನುಗಾರಿಕೆ ಇಲಾಖೆಯ ಮಿಲನ ಭರತ್ ಗೆ ಬೆಳ್ಳಿ ಪದಕ

  ಜನವಾಹಿನಿ News ಮಡಿಕೇರಿ : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರ. ಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ […]

ಹರೇಕಳ ಹಾಜಬ್ಬ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

  ಜನವಾಹಿನಿ News ಮಂಗಳೂರು : ಅಕ್ಷರ ಸಂತ ಹರೇಕಳ ಹಾಜಬ್ಬ , ಇತ್ತೀಚೆಗೆ ನಿಧನರಾದ ಯಕ್ಷಗಾನ ದಿಗ್ಗಜ‌ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ), ದೈವ‌ ನರ್ತಕ ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದವು ಗೌರವ ಡಾಕ್ಟರೇಟ್ ಘೋಷಿಸಿದೆ. ಮಾ.28ರಂದು ಬೆಳಿಗ್ಗೆ 11ಕ್ಕೆ‌ ಮಂಗಳ ಸಭಾಂಗಣದಲ್ಲಿ ನಡೆಯುವ ವಿವಿಯ 44ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.‌ಎಂ.ಸಿ. ಸುಧಾಕರ ಭಾಗವಹಿಸುವರು.‌ ಸಂಸದ‌ ಕ್ಯಾ. ಬ್ರಿಜೇಶ್ ಚೌಟ […]

ಕೇರಳ ಚುನಾವಣೆ ; 2 ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಪೊನ್ನಣ್ಣ ನೇಮಕ

  ಜನವಾಹಿನಿ News ಮಾನಂದವಾಡಿ : ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ಭಾಗವಾಗಿರುವ, ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ, ಎ.ಎಸ್ ಪೊನ್ನಣ್ಣ ರವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ನೇಮಕ ಮಾಡಿ ಆದೇಶಿಸಿದೆ.

ಟಿ20 ವಿಶ್ವಕಪ್ : ಭಾರತಕ್ಕೆ ಐತಿಹಾಸಿಕ ಗೆಲುವು ; ಮೂರನೇ ಬಾರಿ ಚಾಂಪಿಯನ್ಸ್ ಆದ ಟೀಂ ಇಂಡಿಯಾ

    ಜನವಾಹಿನಿ News ಅಹಮದಾಬಾದ್ :  2026ರ ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಟೀಂ ಇಂಡಿಯಾ ನ್ಯೂಜಿಲೆಂಡ್ ಅನ್ನು 96 ರನ್‌ಗಳಿಂದ ಸೋಲಿಸಿ, ಸತತ ಎರಡನೇ ಬಾರಿಗೆ ಮತ್ತು ದಾಖಲೆಯ ಮೂರನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡುವ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗಿಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 255/5 […]