ಮುಂಡಕ್ಕೈ ದುರಂತದ ಮತ್ತಷ್ಟು ಭೀಕರತೆ ಬಯಲು: ಒಂದೇ ಕುಟುಂಬದ 16 ಮಂದಿ ಬಲಿ

ಮೇಪ್ಪಾಡಿ: ವಯನಾಡು ಭೀಕರ ಭೂಕುಸಿತಕ್ಕೆ ಮೃತರ ಸಂಖ್ಯೆ 350ರ ಗಡಿ ದಾಟಿದೆ. 200 ಕ್ಕೂ ಅಧಿಕ ಮಂದಿ ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಆ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರು ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಕಳತ್ತಿಂಗಲ್ ನೌಶೀಬಾ ಅವರ ಕುಟುಂಬದ 16 ಮಂದಿ ಮುಂಡಕ್ಕೈ ಭೂಕುಸಿತದ ವೇಳೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನೌಶಿಬಾ ಅವರ ತಂದೆ, ತಾಯಿ ಸಹೋದರ, ಸೊಸೆಯಂದಿರು, ಗಂಡನ ಕುಟುಂಬದ ಸದಸ್ಯರು ಸೇರಿ 16 ಮಂದಿಯನ್ನು ದುರಂತದಲ್ಲಿ ಕಳೆದುಕೊಂಡಿದ್ದಾರೆ. ನೌಶೀಬಾ (40) ಕಳೆದ ಮೂರು […]
ಗಡ್ಡ ಬಿಟ್ಟುಕೊಂಡಿದ್ದಕ್ಕೆ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರಹಾಕಿದ ಪ್ರಾಂಶುಪಾಲ; ಆರೋಪ

ವಿದ್ಯಾರ್ಥಿಯೋರ್ವ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಹೋಬಿಗಂಜ್‌ನ ಆಜಾದ್ ನೌರಂಗ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಫರ್ಮಾನ್ ಅಲಿಯನ್ನು ಪ್ರಾಂಶುಪಾಲರು ಗಡ್ಡ ಬಿಟ್ಟುಕೊಂಡಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ವರದಿಗಳ ಪ್ರಕಾರ, ಉಚ್ಚಾಟಿತ ವಿದ್ಯಾರ್ಥಿಯ ಹಿರಿಯ ಸಹೋದರ ಜೀಶನ್ ಅಲಿ ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಗಳಿಗೆ ಔಪಚಾರಿಕ ದೂರುಗಳನ್ನು ಸಲ್ಲಿಸಿದ್ದಾರೆ. ಪ್ರಾಂಶುಪಾಲರು ಫರ್ಮಾನ್‌ಗೆ ಕಾಲೇಜಿಗೆ ಪ್ರವೇಶ ನಿರಾಕರಿಸಿರುವುದನ್ನು ತೋರಿಸುವ ವೀಡಿಯೋ ವ್ಯಾಪಕವಾಗಿ ಪ್ರಸಾರವಾಗಿದ್ದು, ಕ್ರಮಕ್ಕಾಗಿ ವ್ಯಾಪಕ ಆಗ್ರಹ […]
ವಯನಾಡು ಭೂ ಕುಸಿತ ದುರಂತಕ್ಕೆ ಗೋಹತ್ಯೆ ಜೊತೆ ಸಂಬಂಧ ಕಲ್ಪಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ನಾಯಕ

ವಯನಾಡು ಭೂಕುಸಿತಕ್ಕೂ ಕೇರಳದ ಗೋಹತ್ಯೆ ಪದ್ಧತಿಗೂ ಸಂಬಂಧ ಕಲ್ಪಿಸಿ ಬಿಜೆಪಿಯ ಹಿರಿಯ ನಾಯಕ ಜ್ಞಾನದೇವ್ ಅಹುಜಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಗೋಹತ್ಯೆ ಎಲ್ಲಿ ನಡೆದರೂ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ರಾಜಸ್ಥಾನದ ಮಾಜಿ ಶಾಸಕ ಅಹುಜಾ ಹೇಳಿದ್ದಾರೆ. ಜುಲೈ 30 ರಂದು, ಮುಂಡಕೈ, ಚುರಲಾಮಲ ಮತ್ತು ಮೆಪ್ಪಾಡಿ ಸೇರಿದಂತೆ ವಯನಾಡಿನ ಗ್ರಾಮಗಳಲ್ಲಿ ಅನೇಕ ಭೂಕುಸಿತಗಳು ಸಂಭವಿಸಿದವು. ಕೇರಳದ ವಯನಾಡ್ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಶನಿವಾರ 358ಕ್ಕೆ ತಲುಪಿದೆ,. ವಯನಾಡು ಭೂಕುಸಿತವು ಗೋವಧೆಯ ನೇರ ಪರಿಣಾಮವಾಗಿದ್ದು, ಕೇರಳದಲ್ಲಿ […]
ವಯನಾಡು ದುರಂತದ ಸಂತ್ರಸ್ತರಿಗೆ 100 ಮನೆ ನಿರ್ಮಿಸಿ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ವಯನಾಡ್ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ ಮಾಡಿಕೊಡುವುದಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ,’ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ […]
ವಯನಾಡು; ಸೇನಾ ಸಮವಸ್ತ್ರದಲ್ಲಿ ಕಾರ್ಯಾಚರಣೆಗಿಳಿದ ಸಿನಿಮಾ ನಟ ಮೋಹನ್ ಲಾಲ್

ವಯನಾಡಿನ ಭೂ ಕುಸಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್ ಲಾಲ್ ಕೈಜೋಡಿಸಿದ್ದಾರೆ. ಭಾರತೀಯ ಸೇನೆಯ ಗಡಿ ಭದ್ರತಾ ವಿಭಾಗದ ಲೆಫ್ಟಿನೆಂಟ್ ಕರ್ನಲ್ ಹುದ್ದೆಯ ಗೌರವ ಹೊಂದಿರುವ ಮೋಹನ್ ಲಾಲ್ ಸೇನಾ ಸಮವಸ್ತ್ರದಲ್ಲೇ ಗುಡ್ಡ ಕುಸಿತವಾದ ಸ್ಥಳಕ್ಕೆ ಬಂದು ಯೋಧರಿಂದ ಪರಿಹಾರ ಕಾರ್ಯದ ಮಾಹಿತಿ ಪಡೆದಿದ್ದಾರೆ. ಬಳಿಕ ಸೇನೆಯ ರಕ್ಷಣಾ ಕಾರ್ಯದಲ್ಲಿ ತಾವು ಕೂಡ ತೊಡಗಿಸಿಕೊಂಡಿದ್ದಾರೆ. ಮೋಹನ್ ಲಾಲ್ ಅವರ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈಗಾಗಲೇ ವಯನಾಡು ದುರಂತಕ್ಕೆ ಸಂಬಂಧಿಸಿ […]
ವಯನಾಡು ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದ ಕೇಂದ್ರ!

ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಎರಡು ಗ್ರಾಮಗಳು ಸಂಪೂರ್ಣವಾಗಿ ನಾಶವಾಗಿದೆ. ಆದರೆ ಕೇಂದ್ರ ಸರಕಾರ ಈ ದುರಂತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನಿರಾಕರಿಸಿದೆ. ಭೂ ಕುಸಿತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇರಳ ಸರಕಾರ ಕೇಂದ್ರಕ್ಕೆ ಆಗ್ರಹಿಸಿತ್ತು. ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಕೇರಳ ಸರಕಾರವು ಈ ದುರಂತವನ್ನು ‘ರಾಜ್ಯ ವಿಪತ್ತು’ ಎಂದು ಘೋಷಿಸಲು ಮುಂದಾಗಿದೆ. ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ’ ಪ್ರದೇಶ ಎಂದು ಘೋಷಿಸಿ ಈಗಾಗಲೇ ರಾಜ್ಯ ಸರಕಾರ ಆದೇಶ […]
ವರ್ಗಾವಣೆಯಾದ ಮರುದಿನವೇ ಪಿಎಸ್ ಐ ಸಾವು; ಸಂಶಯ ಹುಟ್ಟು ಹಾಕಿದ ಪ್ರಕರಣ, ಕುಟುಂಬಸ್ಥರಿಂದ ಶಾಸಕರ ವಿರುದ್ಧ ಗಂಭೀರ ಆರೋಪ

ಯಾದಗಿರಿ ನಗರದ ಪಿಎಸ್‌ಐ ಪರಶುರಾಮ್ ಹೃದಯಾಘಾತದಿಂದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಪರಶುರಾಮ(34) ಅನುಮಾನಸ್ಪಾದವಾಗಿ ಸಾವನ್ನಪ್ಪಿದ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಅವರ ಪುತ್ರ ಪಂಪನಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಯಾದಗಿರಿ ನಗರ ಠಾಣೆಯಿಂದ […]
ಕೇರಳ, ಕರ್ನಾಟಕ ಸೇರಿ ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಘೋಷಣೆ

ಕೇರಳ, ಕರ್ನಾಟಕ ಸೇರಿ ಒಟ್ಟು 6 ರಾಜ್ಯಗಳ ಪಶ್ಚಿಮಘಟ್ಟಗಳನ್ನು ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರಕಾರ ಕರಡು ಅಧಿಸೂಚನೆಯನ್ನೂ ಹೊರಡಿಸಿದೆ. ಕೇರಳದ 9,993 ಚದರ ಕಿ.ಮೀ ಪಶ್ಚಿಮಘಟ್ಟ ಪ್ರದೇಶ, ಕರ್ನಾಟಕ, ಗೋವಾ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಪಶ್ಚಿಮಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಸರ್ಕಾರ ಗುರುತಿಸಿದೆ. ಒಟ್ಟು 56 ಸಾವಿರದ 825 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಎಂದು ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ, ಈ ಬಗ್ಗೆ ಮುಂದಿನ 60 […]
ವಯನಾಡು ದುರಂತ; ಮನೆ ಕೊಚ್ಚಿಕೊಂಡು ಹೋದರು, ಬದುಕುಳಿದ 40 ದಿನದ ಮಗು!

ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಅವಶೇಷಗಳಡಿ ಈಗಾಗಲೇ 330ಕ್ಕೂ ಅಧಿಕ ಮೃತದೇಹವನ್ನು ಪತ್ತೆಹಚ್ಚಲಾಗಿದೆ. 300ರಷ್ಟು ಮಂದಿ ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಮನೆ ಕೊಚ್ಚಿಕೊಂಡು ಹೋದರೂ 40 ದಿನದ ಪುಟ್ಟ ಹೆಣ್ಣು ಮಗು ಮತ್ತು ಆಕೆಯ ಆರು ವರ್ಷದ ಸಹೋದರ ವಿಕೋಪದಲ್ಲಿ ಬದುಕಿ ಉಳಿದಿರುವ ಪವಾಡ ಸದೃಶ ಘಟನೆ ವರದಿಯಾಗಿದೆ. ಕುಟುಂಬದ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರೂ, ಅನಾರ ಮತ್ತು ಮುಹಮ್ಮದ್ ಹಯಾನ್ ಬದುಕಿ […]
ವಿದ್ಯುತ್ ಬೋರ್ಡ್ ನಲ್ಲಿ ನೇತು ಹಾಕಿದ್ದ ಮೊಬೈಲ್ ಚಾರ್ಜರ್ ಕಚ್ಚಿದ ಮಗು ವಿದ್ಯುತ್ ಶಾಕ್ ಹೊಡೆದು ಮೃತ್ಯು

ಒಂದೂವರೆ ವರ್ಷದ ಮಗು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ಆಘಾತಕಾರಿ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಡಂ ಮಂಡಲದ ಕೋಟ ಮಡ್ಡಿಪಡಗ ಗ್ರಾಮದಲ್ಲಿ ನಡೆದಿದೆ. ದುರ್ಗಂ ಆರಾಧ್ಯ ಮೃತ ಒಂದೂವರೆ ವರ್ಷದ ಬಾಲಕಿ. ಬಾಲಕಿ ವಿದ್ಯುತ್ ಬೋರ್ಡ್ ನಲ್ಲಿ ನೇತು ಹಾಕಿದ್ದ ಚಾರ್ಜರ್ ಕೇಬಲ್ ಹಿಡಿದು ಆಟವಾಡುತ್ತಿತ್ತು. ಈ ವೇಳೆ ಚಾರ್ಜರ್ ನ್ನು ಕಚ್ಚಿದ್ದು, ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಬಾಲಕಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆದರೇ ಚಿಕಿತ್ಸೆ ಫಲಿಸದೆ ಬಾಲಕಿ ದುರ್ಗಂ ಆರಾಧ್ಯ […]