ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]
ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ

ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ ಆಯ್ಕೆ ಕೊಡಗು : ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸಚಿನ್ಸೋ ಪೂವಯ್ಯ ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಸಚಿನ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಉಂಜಿಗನಹಳ್ಳಿ ನಿವಾಸಿ ಪೂವಯ್ಯ.ಹೆಚ್.ಎಸ್ ಹಾಗೂ ಸರಸು.ಹೆಚ್.ಪಿ. ದಂಪತಿಗಳ ಪುತ್ರ. ಸಚಿನ್ ಈಗಾಗಲೇ ಜಿಲ್ಲೆ ಹಾಗೂ ರಾಜ್ಯ […]
ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ

ವೀರಭದ್ರೇಶ್ವರ ವರ್ಧಂತಿ ಮಹೋತ್ಸವ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಹೆಚ್.ಡಿ.ದೇವೇಗೌಡರಿಗೆ ಆಹ್ವಾನ ಕೊಡಗು : ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ರಾಷ್ಟ್ರದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸಲಾಯಿತು. ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವತಿಯಿಂದ ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ವೀರಭದ್ರೇಶ್ವರ ವರ್ಧಂತಿ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮಠಧೀಷರ ನೇತೃತ್ವದಲ್ಲಿ ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡರನ್ನು ಭೇಟಿಮಾಡಿದ ತಂಡ ವೀರಭದ್ರೇಶ್ವರ ಜಯಂತಿಯ ಮಹತ್ವ ಹಾಗೂ ಆಚರಣೆಯ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಈ […]
ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಕೊಡಗು : ಜಿಲ್ಲೆಯ ವಿರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 2025-26ನೇ ಸಾಲಿನ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಇದರಲ್ಲಿ ಜೂನಿಯರ್ ವಿಭಾಗದಲ್ಲಿ […]
ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಳದ ಆತಂಕ : ಕೇಂದ್ರಕ್ಕೆ ಯದುವೀರ್ ಮಾಹಿತಿ

ಅಮಿತ್ ಶಾ ಭೇಟಿ ಮಾಡಿದ ಯದುವೀರ್ ಒಡೆಯರ್ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಆತಂಕದ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ಮಾಹಿತಿ. ಮೈಸೂರು : ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ನಮ್ಮ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಇತರೆ ಪ್ರಮುಖ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ನವದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ […]
ಖ್ಯಾತ ಬಹುಭಾಷಾ ನಟಿ ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ (87) ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ […]
ಬಂಟ್ವಾಳ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ಸೆ.16 ರಂದು ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ […]
ಉಡುಪಿ; ಸಂಬಂಧಿ ಮಹಿಳೆಯ ಪ್ರಾಣ ರಕ್ಷಿಸಿ ಜೀವ ಕಳೆದುಕೊಂಡ ಉಪನ್ಯಾಸಕಿ

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್ ಅಕೌಂಟೆಂಟ್ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ […]
ಕಾಟಿಪಳ್ಳ ಮಸೀದಿಗೆ ಕಲ್ಲೆಸೆತ ಪ್ರಕರಣ; ಐವರು ಆರೋಪಿಗಳ ಬಂಧನ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ಆರೋಪಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು.
ಬರೊಬ್ಬರಿ 50ಕ್ಕೂ ಅಧಿಕ ಪ್ರಕರಣಗಳ ಆರೋಪಿ ಕುಖ್ಯಾತ ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು ಪೊಲೀಸರು ಬಂಧಿಸಿದ್ದು, 3 ಬೈಕ್ ಗಳು, ಸೇರಿ ಮೊಬೈಲ್ ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸರು ಕುಖ್ಯಾತ ರೌಡಿಶೀಟರ್ ಬ್ಯಾಟರಿ ಜಯಂತ್ ನನ್ನು ಬಂಧಿಸಿದ್ದಾರೆ ಬ್ಯಾಟರಿ ಜಯಂತ್ ವಿರುದ್ಧ ಕೊಲೆ, ಕೊಲೆಯತ್ನ, ದರೋಡೆ ಸೇರಿ ಬರೋಬ್ಬರಿ 56 ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಯಂತ್ ವಿರುದ್ಧ ಕೊಲೆ, ಕೊಲೆ ಯತ್ನ, ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಿವೆ. ಸದ್ಯ ಜಾಮೀನಿನ […]