Breaking News :

ಟಿ20 ವಿಶ್ವಕಪ್ ಸೆಮಿ ಫೈನಲ್ಸ್: ಇಂಗ್ಲೆಂಡ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

    ಜನವಾಹಿನಿ News ಮುಂಬೈ : ಇಂಗ್ಲೆಂಡ್ ವಿರುದ್ಧ ನಡೆದಿದ್ದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ರನ್ಗಳಿಂದ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 246 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ಬೃಹತ್ ಮೊತ್ತ ಸಿಡಿಸಿದರೂ ಭಾರತ ಪಂದ್ಯ ಕ್ಷಣ ಕ್ಷಣಕ್ಕೂ ರೋಚಕ […]

ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ 

  ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]

ಕೇರಳ ಚುನಾವಣಾ ಪ್ರಚಾರದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಇಂದು ನಡೆದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ.ಜೆ ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಪಾಲ್ಗೊಂಡರು.

ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮನ್ ರೇಗಾ ಬಚಾವ್ ಸಂಗ್ರಾಮ : ಬಡವರ ಮೇಲೆ ಬಿಜೆಪಿ ದಾಳಿ : ಶಾಸಕ ಪೊನ್ನಣ್ಣ ಆರೋಪ 

ಜನವಾಹಿನಿ News ವಿರಾಜಪೇಟೆ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಿಂದ ಮಹಾತ್ಮಗಾಂಧಿ ಹೆಸರನ್ನು ಕೈಬಿಟ್ಟಿರುವ ಕೇಂದ್ರ ಸರ್ಕಾರದ ವಿರುದ್ಧ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಾವೇರಿ ಕಾಲೇಜು ಸಮೀಪದಿಂದ ಆರಂಭವಾದ ಮನ್ ರೇಗಾ ಬಚಾವ್ ಸಂಗ್ರಾಮದ ಪಾದಯಾತ್ರೆಯು ವಿರಾಜಪೇಟೆ ಕಾರುನಿಲ್ದಾಣದಲ್ಲಿ ಸಮಾರೋಪಗೊಂಡಿತು. ಈ ವೇಳೆ ಪ್ರತಿಭಟನಾನಿರತರು ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಬೃಹತ್ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ […]

ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಬರೆದ ಕೊಡಗಿನ ಗಗನ್

ಐತಿಹಾಸಿಕ ಸಾಧನೆ ಗೈದ “ಗಗನ್ – ಡೀನ್ ” ಜೋಡಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ  ಜನವಾಹಿನಿ News ಮಡಿಕೇರಿ : ಹಾಕಿ, ಕ್ರಿಕೆಟ್, ಟೆನಿಸ್ ಹೀಗೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಕೊಡಗಿನವರ ಸಾಧನೆ ಅಪಾರ. ಇದೀಗ ಈ ಪಟ್ಟಿಯಲ್ಲಿ ಮೋಟಾರ್ ಸ್ಪೋರ್ಟ್ಸ್ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ (INRC) ನಲ್ಲಿ ಓವರ್ ಆಲ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಕೊಡಗಿನ ಯುವನೋರ್ವ ಪ್ರಥಮ ಬಾರಿಗೆ ಇತಿಹಾಸ ಸೃಷ್ಟಿಸಿದ್ದಾರೆ. ಅಮ್ಮತ್ತಿ-ಹೊಸೂರಿನ ಕೊಂಗಂಡ ಕುಟುಂಬಕ್ಕೆ ಸೇರಿದ ಗಗನ್ ಕರುಂಬಯ್ಯ ರವರೆ ಈ ಸಾಧನೆ […]

ಕಂಬಳದಲ್ಲಿ ಹೊಸ ದಾಖಲೆ ಸೃಷ್ಠಿಸಿದ ಪೃಥ್ವಿರಾಜ್

ಜನವಾಹಿನಿ News ಪುತ್ತೂರು : ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಡೆದ ಕೋಟಿ ಚೆನ್ನಯ ಜೋಡುಕರೆ ಕಂಬಳದಲ್ಲಿ ಕೋಣ ಓಡಿಸುವ ವೇಗದಲ್ಲಿ ಹೊಸ ದಾಖಲೆ ನಿರ್ಮಾಣ ಗೊಂಡಿದೆ ಎಂದು ಕಂಬಳದ ಆಯೋಜಕರು ತಿಳಿಸಿದ್ದಾರೆ. ಶ್ರೀ ಪಂಚಲಿಂಗೇಶ್ವರ ಉರುವಾಲು ನಾರಾಳುಗುತ್ತು ಸದಾನಂದ ಗೌಡ ಅವರ ಕುಟ್ಟಿ – ಕಾಲೆ ಕೋಣಗಳ ಜೋಡಿ ನೇಗಿಲು ಕಿರಿಯ ವಿಭಾಗ ಸ್ಪರ್ಧೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಈ ಕೋಣಗಳನ್ನು ಪಡು ಸಾಂತೂರಿನ 22 ವರ್ಷ ಪ್ರಾಯದ ಪೃಥ್ವಿರಾಜ್ ಪೂಜಾರಿ ಎಂಬ ಯುವಕ […]

ಪಾಲಿಬೆಟ್ಟ: ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ – ರೆಡ್ ಯುನೈಟೆಡ್ ಊಟಿ ತಂಡ ಚಾಂಪಿಯನ್

  ಜನವಾಹಿನಿ News ಪಾಲಿಬೆಟ್ಟ : ಯಂಗ್ ಇಂಡಿಯಾ ಯೂತ್ ಕ್ಲಬ್ ನ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ ಮಟ್ಟದ ಸೂಪರ್ ಫೈ ಕಾಲ್ಚೆಂಡು ಕ್ರೀಡಾ ಹಬ್ಬಕ್ಕೆ ವರಣರಂಜಿತ ತೆರೆಕಂಡಿದೆ. ಪಾಲಿಬೆಟ್ಟ ಸಾರ್ವಜನಿಕ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯ ಅಂತಿಮ ಫೈನಲ್ ಪಂದ್ಯಾಟದಲ್ಲಿ ಕ್ಲಾಸಿಕ್ ಸ್ಪೋರ್ಟ್ ಕ್ಲಬ್ ಮತ್ತು ರೆಡ್ ಯುನೈಟೆಡ್ ಊಟಿ ತಂಡದ ನಡುವೆ ನಡೆದ ರೋಮಾಂಚನಕಾರಿ ಪಂದ್ಯಾವಳಿಯಲ್ಲಿ 3-0 ಗೋಲುಗಳಿಂದ ರೆಡ್ ಯುನೈಟೆಡ್ ಊಟಿ ತಂಡ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ […]

ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

ಜನವಾಹಿನಿ News ಮಡಿಕೇರಿ : ಕನ್ನಡ ನಾಡು ಹಾಗೂ ಭಾಷೆಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕವಿ ಕುವೆಂಪು ಅವರ ಈಗಿರುವ ಪ್ರತಿಮೆ ಜಾಗದಲ್ಲಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವಂತಾಗಬೇಕು ಎಂದು ಜಿ.ಪಂ.ಮಾಜಿ ಅಧ್ಯಕ್ಷರು ಹಾಗೂ ಕುವೆಂಪು ಕುಟುಂಬದ ಸಂಬಂಧಿಕರಾದ ಕೆ.ಪಿ.ಚಂದ್ರಕಲಾ ಅವರು ಕೋರಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ಸೋಮವಾರ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡ ಭಾಷೆಯಲ್ಲಿ […]

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ..!

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು […]

ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀ ರಾಮನ ಪ್ರತಿಮೆ ಅನಾವರಣ

  ಜನವಾಹಿನಿ News ಗೋವಾ : ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿರುವ ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. 77 ಅಡಿ ಎತ್ತರ ಹೊಂದಿರುವ ಈ ಭವ್ಯ ಮೂರ್ತಿ ದೇಶದ ಸಾಂಸ್ಕೃತಿಕ ಪರಂಪರೆ, ಭಕ್ತಿ ಮತ್ತು ಶಿಲ್ಪಕಲೆಯ ಅದ್ಭುತ ಸಂಯೋಗವಾಗಿ ಗೋವಾದ ಹೊಸ ಗುರುತಾಗಲಿದೆ. ಈ ಮೂರ್ತಿಯನ್ನು ಖ್ಯಾತ ಶಿಲ್ಪಿ ರಾಮ್ ಸುತಾರ್ ಮತ್ತು ಅವರ ತಂಡ ನಿರ್ಮಿಸಿದ್ದಾರೆ. ಅಧಿಕ ಚರ್ಚೆಗೆ ಕಾರಣವಾದ ಸರ್ದಾರ್ […]