ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.
ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]
ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರ ಭಾರತಕ್ಕೆ ತರಲು ಸರಕಾರದಿಂದ ನೆರವು

ವಿದೇಶದಲ್ಲಿ ಮೃತಪಟ್ಟ ವ್ಯಕ್ತಿಯ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಸರಕಾರದಿಂದ ನೆರವು ಮಡಿಕೇರಿ : ಶಾಸಕ ಪೊನ್ನಣ್ಣ ರವರ ಪ್ರಯತ್ನದಿಂದ, ಅಮೆರಿಕದ ಗಯಾನ ದೇಶದಲ್ಲಿ ನಿಧನರಾದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮದೆನಾಡು ಗ್ರಾಮದ, ಗಿರೀಶ್ ಪಾಲೆ ಬಾಬು ರವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು. ಇತ್ತೀಚೆಗೆ ಅಮೆರಿಕದ ಗಯಾನದಲ್ಲಿ ಅನಾರೋಗ್ಯದಿಂದ ಮೃತಪಟ್ಟ ಗಿರೀಶ್ ರವರ ಮೃತ ದೇಹವನ್ನು ಭಾರತಕ್ಕೆ ತರಲು ಅವರ ಬಡ ಕುಟುಂಬಕ್ಕೆ ಸಾಧ್ಯವಾಗದನ್ನು ಸ್ಥಳೀಯರಿಂದ ಮಾಹಿತಿ ಪಡೆದ […]
ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ

ವಿರಾಜಪೇಟೆಯ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಆಯ್ಕೆ ಕೊಡಗು : ಜಿಲ್ಲೆಯ ವಿರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 2025-26ನೇ ಸಾಲಿನ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ತಮಿಳುನಾಡಿನ ಮಹಾಬಲಿಪುರಂನಲ್ಲಿ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ಇದರಲ್ಲಿ ಜೂನಿಯರ್ ವಿಭಾಗದಲ್ಲಿ […]
ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡ ಎಂಪಾಕ್ಸ್ ವೈರಸ್: ಮನುಷ್ಯನಿಂದ ಮನುಷ್ಯನಿಗೆ ಹರಡುವ ಈ ವೈರಸ್ ಬಗ್ಗೆ ಜಗತ್ತಿಗೆ ಹೆಚ್ಚಿದ ಭೀತಿ

ಎಂಪಾಕ್ಸ್ ವೈರಸ್ ಆಫ್ರಿಕನ್ ದೇಶದಲ್ಲಿ ಏಕಾಏಕಿ ಉಲ್ಬಣಗೊಂಡಿದೆ. ಈ ಹಿಂದೆ ಮಂಕಿಪಾಕ್ಸ್ ಎಂದು ಕರೆಯಲ್ಪಡುವ ಈ ವೈರಸ್ ವೇಗವಾಗಿ ಹರಡುವ ಕಾಯಿಲೆಯಾಗಿದ್ದು, ಇದನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ಚರ್ಚೆ ನಡೆಸುತ್ತಿದೆ. ಆಫ್ರಿಕನ್ ದೇಶಗಳಲ್ಲಿ ಎಂಪಾಕ್ಸ್ ವೈರಸ್‌ನ ಮಾರಣಾಂತಿಕ ರೂಪಾಂತರದ ಪ್ರಕರಣಗಳ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಬುಧವಾರ ಅಂತರಾಷ್ಟ್ರೀಯ ತಜ್ಞರ ತುರ್ತು ಸಭೆ ಕರೆದಿದ್ದರು. Mpox ವೈರಸ್ ಎಂದರೇನು? ಮಂಕಿಪಾಕ್ಸ್ ಎಂದು […]
ಜಪಾನ್ ನಲ್ಲಿ ಪ್ರಬಲ ಭೂಕಂಪನ; ಸುನಾಮಿ ಎಚ್ಚರಿಕೆ, ಆತಂಕದಲ್ಲಿ ಜನ

ಜಪಾನ್ ನ ಕ್ಯೂಶು ಪ್ರದೇಶದ ಮಿಯಾಝಾಕಿ ಪ್ರಾಂತ್ಯದ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪನವು ಸಂಭವಿಸಿದೆ. ಭೂಕಂಪನದ ಜೊತೆ ಸುನಾಮಿ ಎಚ್ಚರಿಕೆಯನ್ನು ಕೂಡ ನೀಡಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಜಪಾನಿನ ಕ್ಯೂಶು ದ್ವೀಪದಾದ್ಯಂತ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಭೂಕಂಪ ಸಂಭವಿಸಿದ ಸ್ಥಳದಲ್ಲಿನ ಸಾವು- ನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.
ಅನರ್ಹತೆ ಬೆನ್ನಲ್ಲೆ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್: ಭಾವನಾತ್ಮಕ ಟ್ವೀಟ್..

ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದರೂ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಾಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ. ತಾನು ಕುಸ್ತಿಗೆ ನಿವೃತ್ತಿ ಹೇಳುತ್ತಿದ್ದೇನೆ ಎಂದು ಫೋಗಾಟ್ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಈ ಮೊದಲು 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್ ಈ ಬಾರಿ ಅವಕಾಶ ಸಿಗದ ಕಾರಣ 50 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ಹೀಗಾಗಿ ಸ್ಪರ್ಧೆ ಆರಂಭವಾಗುವ ದಿನ ಬೆಳಿಗ್ಗೆ ನಡೆಸುವ ತೂಕ ಪರಿಶೀಲನೆಯಲ್ಲಿ ಸ್ಪರ್ಧಿ 50 ಅಥವಾ […]
ದೇಶ ತೊರೆದ ಶೇಖ್ ಹಸೀನಾಗೆ ವ್ಯಂಗ್ಯ ಮಾಡಿದ ವಿವಾದಾತ್ಮಕ ಲೇಖಕಿ ತಸ್ಲೀಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ವ್ಯಾಪಕ ಹಿಂಸಾಚಾರದಿಂದಾಗಿ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಈ ಬಗ್ಗೆ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದಾತ್ಮಕ ಲೇಖಕಿಯಾಗಿರುವ ತಸ್ಲೀಮಾ ನಸ್ರೀನ್, ಇಸ್ಲಾಂಮಿಸ್ಟ್ ಗಳನ್ನು ಮೆಚ್ಚಿಸಲು ಶೇಖ್ ಹಸೀನಾ ನನ್ನನ್ನು ಬಾಂಗ್ಲಾದೇಶದಿಂದ ಹೊರ ಹಾಕಿದ್ದರು. ಈಗ ಅದೇ ಜನರು ವಿದ್ಯಾರ್ಥಿ ಚಳವಳಿ ಮೂಲಕ ಶೇಖ್ ಹಸೀನಾ ಅವರನ್ನು ದೇಶ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ನಾನು 1999ರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ತಾಯಿಯನ್ನು ನೋಡಲು ಬಾಂಗ್ಲಾಕ್ಕೆ […]
ಹಸೀನಾ ಬಾಂಗ್ಲಾದೇಶ ತೊರೆಯುತ್ತಿದ್ದಂತೆ ಜೈಲಿನಿಂದ ಮಾಜಿ ಪ್ರಧಾನಿ ಖಲೀದಾ ಜಿಯಾ ಬಿಡುಗಡೆ

ಬಾಂಗ್ಲಾದೇಶದಲ್ಲಿ ವ್ಯಾಪಕವಾದ ಹಿಂಸಾಚಾರದ ಬೆನ್ನಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದರ ಬೆನ್ನಲ್ಲಿ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್, ಜೈಲಿನಲ್ಲಿದ್ದ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ವಿರೋಧ ಪಕ್ಷದ ಸದಸ್ಯರೊಂದಿಗೆ ಚರ್ಚಿಸಿದ ನಂತರ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ ಪಿ) ಅಧ್ಯಕ್ಷರನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಅಧ್ಯಕ್ಷ […]
ಬಾಂಗ್ಲಾದೇಶದಲ್ಲಿ ವ್ಯಾಪಕ ಹಿಂಸಾಚಾರ ಹಿನ್ನೆಲೆ: ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ

ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಹಿಂಸಾತ್ಮಕ ಘರ್ಷಣೆಗಳಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪಿದ್ದಾರೆ. ಮತ್ತು ನೂರಾರು ಜನ ಗಾಯಗೊಂಡಿದ್ದಾರೆ. ಇದರ ನಡುವೆ ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲು ಸಿದ್ಧರಾಗಿದ್ದಾರೆ. ರಾಷ್ಟ್ರವ್ಯಾಪಿ ಕರ್ಫ್ಯೂ […]