ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ; ಭದ್ರತಾ ಲೋಪದ ಹಿನ್ನೆಲೆ 20ಕ್ಕೂ ಅಧಿಕ ಅಧಿಕಾರಿಗಳ ಬಂಧನ

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆ ಹತ್ಯೆ ಬೆನ್ನಲ್ಲಿ ಇರಾನ್ ಕೆಂಡಾಮಂಡಲವಾಗಿದೆ. ಈ ಮಧ್ಯೆ ಭದ್ರತೆಯಲ್ಲಿ ಉಂಟಾದ ಲೋಪಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು, ಸೇನಾಧಿಕಾರಿಗಳು ಹಾಗೂ ರಾಜಧಾನಿಯಲ್ಲಿರುವ ಸೇನೆಯ ಅತಿಥಿ ಗೃಹದಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಮಂದಿಯನ್ನು ಇರಾನ್‌ನಲ್ಲಿ ಬಂಧಿಸಲಾಗಿದೆ. ಟೆಹರಾನ್‌ನಲ್ಲಿರುವ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಹನಿಯೆ ಅವರನ್ನು ಬುಧವಾರ ಹತ್ಯೆ ಮಾಡಲಾಗಿತ್ತು. ಹನಿಯೆ ಅವರು ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಇರಾನ್‌ನ ನೂತನ ಅಧ್ಯಕ್ಷರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇರಾನ್ ರಾಷ್ಟ್ರ […]
ಇಥಿಯೋಪಿಯಾದಲ್ಲಿ ಭೂಕುಸಿತದಿಂದ ಮಣ್ಣಿನಡಿ ಸಿಲುಕಿದ ನೂರಾರು ಮಂದಿ; ರಕ್ಷಣಾ ಕಾರ್ಯಾಚರಣೆಗೆ ಬೇಕಿದ್ದ ಯಂತ್ರಗಳೇ ಇಲ್ಲದೆ ಪರಿಸ್ಥಿತಿ ಶೋಚನೀಯ

ಭಾರೀ ಮಳೆಯಿಂದಾಗಿ ದಕ್ಷಿಣ ಇಥಿಯೋಪಿಯಾದ ಪ್ರಾದೇಶಿಕ ರಾಜ್ಯದಲ್ಲಿನ ಗೋಫಾ ವಲಯದಲ್ಲಿ ಭೂಕುಸಿತದಿಂದ ಹಲವಾರು ಮಂದಿ ಜೀವಂತವಾಗಿ ಸಮಾಧಿಯಾಗಿದ್ದಾರೆ. ಅಲ್ಲಿನ ಸ್ಥಿತಿ ಶೋಚನೀಯವಾಗಿದ್ದು, ಮಣ್ಣಿನಡಿ ಸಿಲುಕಿದವರ ರಕ್ಷಣೆಗೆ ಪರದಾಟವೇ ನಡೆಯುತ್ತಿದೆ. ಭಾರೀ ಮಳೆಯಿಂದ ಇಥಿಯೋಪಿಯಾದ ಭಾಗದಲ್ಲಿ ಭೂ ಕುಸಿತವಾಗಿ 157 ಜನರು ಸಾವನ್ನಪ್ಪಿದ್ದಾರೆ. ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸ್ಥಳದಿಂದ ಕೆಂಪು ಮಣ್ಣನ್ನು ಜನರು ಕೈಯಿಂದ ಅಗೆಯುತ್ತಿರುವುದು ಕಂಡು ಬರುತ್ತಿದೆ. ಅವರ ಬಳಿ ಮಣ್ಣು ತೆಗೆಯುವ ಯಂತ್ರ ಕೂಡ ಇಲ್ಲ. […]
ಯುಎಇಯಲ್ಲಿ ಪ್ರತಿಭಟನೆ ನಡೆಸಿದ್ದಕ್ಕೆ 53 ಮಂದಿಗೆ 10 ವರ್ಷ ಜೈಲು ಶಿಕ್ಷೆ

ಬಾಂಗ್ಲಾದೇಶದಲ್ಲಿನ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಯುಎಇಯಲ್ಲಿ ಪ್ರತಿಭಟನೆ ನಡೆಸಿದ 57 ಬಾಂಗ್ಲಾದೇಶಿಗರನ್ನು ಯುಎಇ ನ್ಯಾಯಾಲಯ 10 ವರ್ಷ ಜೈಲಿಗೆ ತಳ್ಳಿದೆ. ಬಾಂಗ್ಲಾದೇಶ ಸರ್ಕಾರವು ತೆಗೆದುಕೊಂಡ ಮಿಸಲಾತಿ ನಿರ್ಧಾರಗಳನ್ನು ವಿರೋಧಿಸಿ ಯುಎಇಯ ಹಲವಾರು ಬೀದಿಗಳಲ್ಲಿ ಬಾಂಗ್ಲಾದೇಶಿಗಳು ಪ್ರತಿಭಟನಾ ಜಾಥಾವನ್ನು ನಡೆಸಿದ್ದರು. ಯುಎಇಯಲ್ಲಿ ಬಾಂಗ್ಲಾದೇಶದ ವಲಸಿಗರು ಅತೀ ಹೆಚ್ಚು ಸಂಖ್ಯೆಯಲ್ಲಿದ್ದು, ಅಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾರೆ. ಇದೀಗ ಬಾಂಗ್ಲಾದೇಶದ ವಿರುದ್ದ ಯುಎಇಲ್ಲಿ ಪ್ರತಿಭಟನೆ ನಡೆಸಿದ್ದಕ್ಕೆ ಅಬುಧಾಬಿ ಫೆಡರಲ್ ಮೇಲ್ಮನವಿ ನ್ಯಾಯಾಲಯವು 53 ಬಾಂಗ್ಲಾದೇಶದ ಪ್ರಜೆಗಳಿಗೆ […]
ಕುವೈಟ್ ನಲ್ಲಿ ಭೀಕರ ಅಗ್ನಿ ಅವಘಡ; ಕೇರಳದ ದಂಪತಿ & ಇಬ್ಬರು ಮಕ್ಕಳು ಮೃತ್ಯು

ಕುವೈಟ್ ನ ಮನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಮ್ಯಾಥ್ಯೂ ಮುಲಕಲ್, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್ ಮತ್ತು ಐರಿನ್ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂ ಕುವೈತ್‌ನಲ್ಲಿ ಉದ್ಯೋಗದಲ್ಲಿದ್ದು, ಅಬ್ಬಾಸಿಯಾದಲ್ಲಿ ಕಳೆದ 15 ವರ್ಷದಿಂದ ಕುಟುಂಬದೊಂದಿಗೆ ನೆಲೆಸಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲಿ ಎ.ಸಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಕೊಚ್ಚಿ ನೆಡುಂಬಸ್ಸರಿ ಮೂಲದವರಾದ ಮ್ಯಾಥ್ಯೂ ಮುಲಕಲ್ ಅವರು ತಾಯಿ ಹಾಗೂ […]
ಬಾಂಗ್ಲಾದಲ್ಲಿ ಹಿಂಸಾಚಾರ; ಆಶ್ರಯ ಅರಸಿ ಭಾರತಕ್ಕೆ ಬರುತ್ತಿರುವ ಜನ!

ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈವರೆಗೆ ಮೃತರ ಸಂಖ್ಯೆ 105 ತಲುಪಿದೆ. ಈ ಮಧ್ಯೆ ಅಲ್ಲಿನ ನಾಗರಿಕರು ದೇಶದ ಗಡಿ ದಾಟಿ ಭಾರತಕ್ಕೆ ಪಲಾಯನ ಮಾಡುತ್ತಿರುವುದು ಕಂಡು ಬಂದಿದೆ. ಭಾರತ, ನೇಪಾಳ ಮತ್ತು ಭೂತಾನ್‌ನ 360ಕ್ಕೂ ಹೆಚ್ಚು ನಾಗರಿಕರು ಶುಕ್ರವಾರ ಹಿಂಸಾಚಾರ ಪೀಡಿತ ಬಾಂಗ್ಲಾದೇಶದಿಂದ ಮೇಘಾಲಯಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರದಿಂದಾಗಿ ರಾಜ್ಯಕ್ಕೆ ಆಶ್ರಯ ಅರಸಿ ಬಂದವರ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದ್ವಾಕಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ […]
ಗಾಝಾದಲ್ಲಿ ಕದನ ವಿರಾಮಕ್ಕೆ ಬೆಂಬಲ ಪುನರುಚ್ಚರಿಸಿದ ಭಾರತ

ಭಾರತವು ಗಾಝಾದಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮದ ಕರೆಯನ್ನು ಬುಧವಾರ ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ್ದು, ಹಮಾಸ್ ವಶದಲ್ಲಿರುವ ಎಲ್ಲ ಒತ್ತೆಯಾಳುಗಳ ಬಿಡುಗಡೆಗೆ ಆಗ್ರಹಿಸಿದೆ. ಬುಧವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಧ್ಯಪ್ರಾಚ್ಯ ಕುರಿತು ಮುಕ್ತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಉಪ ಪ್ರತಿನಿಧಿ ಆರ್.ರವೀಂದ್ರ ಅವರು, ‘2023,ಅ.7ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ ಎಂದು ಹೇಳಿದ್ದಾರೆ. ಇಸ್ರೇಲ್-ಹಮಾಸ್ ಸಂಘರ್ಷದ ವೇಳೆ ನಾಗರಿಕರ ಜೀವಹಾನಿಯನ್ನೂ ನಾವು ಖಂಡಿಸಿದ್ದೇವೆ. ಸಂಯಮವನ್ನು […]
ನೇಪಾಲದ ಪ್ರಧಾನಿಯಾಗಿ ಕೆಪಿ ಶರ್ಮಾ ಓಲಿ ಆಯ್ಕೆ

ನೇಪಾಳದ ಅಧ್ಯಕ್ಷರಾಗಿ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆಪಿ ಶರ್ಮಾ ಒಲಿ ಅವರು ಆಯ್ಕೆಯಾಗಿದ್ದಾರೆ. ಸೋಮವಾರ ಉನ್ನತ ಹುದ್ದೆಗೆ ಏರಲಿರುವ ಒಲಿ ಅವರು ಪುಷ್ಪ ಕಮಲ್ ದಹಲ್ ಪ್ರಚಂಡ ಅವರ ನಂತರ ವಿಶ್ವಾಸ ಮತದಲ್ಲಿ ಅಧಿಕಾರ ವಹಿಸಿಕೊಂಡರು. ಇದೀಗ ಸಮ್ಮಿಶ್ರ ಸರ್ಕಾರವಾದರೂ ನಾಲ್ಕನೇ ಅವಧಿಗೆ ದೇಶದ ಪ್ರಧಾನಿಯಾಗಿ ಮರಳಲು ಸಜ್ಜಾಗಿದ್ದಾರೆ. ರಾಷ್ಟ್ರಪತಿ ಭವನದ ಮುಖ್ಯ ಕಟ್ಟಡವಾದ ಶೀತಲ್ ನಿವಾಸ್‌ನಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ.ಪಿ.ಶರ್ಮಾ […]
ಶ್ರೀಲಂಕಾ; ಕ್ರಿಕೆಟಿಗನ ಹತ್ಯೆ

ಶ್ರೀಲಂಕಾ ಅಂಡರ್ 19 ತಂಡದ ಮಾಜಿ ನಾಯಕ ಧಮಿಕಾ ನಿರ್ಶೋನಾ ಅವರನ್ನು ಮಂಗಳವಾರ ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಮಾಜಿ ಕ್ರಿಕೆಟಿಗ ಖಂಂಡಾ ಮವಾತಾ ಅವರ ನಿವಾಸದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಧ್ಯಮಗಳ ವರದಿ ಪ್ರಕಾರ, ಈ ಘಟನೆ ನಡೆಯುವ ವೇಳೆಯಲ್ಲಿ ಧಮಿಕಾ ನಿರ್ಶೋನಾ ಅವರ ಜತೆ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಜತೆಗಿದ್ದರು ಎನ್ನಲಾಗುತ್ತಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ, […]