ಯುವನಿಧಿ ಭಿತ್ತಿ ಪತ್ರ ಬಿಡುಗಡೆ

ಜನವಾಹಿನಿ NEWS ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ. ಬಿ ಅವರು ಮಾತಾನಾಡಿ 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ […]
ಸಿಸ್ಕೊ ಸಂಸ್ಥೆಯಿಂದ ಹೆಗ್ಗಳ ಶಾಲೆಗೆ ಕೊಡುಗೆ

ಜನವಾಹಿನಿ NEWS ವಿರಾಜಪೇಟೆ : ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಜಾಗೃತಿ ಹಾಗೂ ಸಿಸ್ಕೊ ಸಂಸ್ಥೆಯ ಸ್ವಯಂ ಸೇವಕರು ಆಗಮಿಸಿ ವಿದ್ಯಾರ್ಥಿಗಳಿಗೆ ಆಟದ ವಸ್ತುಗಳು, ಡ್ರಾಯಿಂಗ್ ಚಾರ್ಟ್, ಲೇಖನಿ, ಶಾಲೆಗೆ ಪೈಂಟಿಂಗ್, ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಿದರು. ಮಾತ್ರವಲ್ಲದೆ ಮಕ್ಕಳಿಗೆ ಮದ್ಯಾಹ್ನ ದ ಉಪಹಾರದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಿದರು. ಒಟ್ಟು ಇಪ್ಪತ್ತು ಸ್ವಯಂ ಸೇವಕರನ್ನು ಒಳಗೊಂಡ ತಂಡದಲ್ಲಿ ಸಿಸ್ಕೊ ಸಂಸ್ಥೆಯ ಮಚ್ಚಾರಂಡ ಅಯ್ಯಪ್ಪ, ಜಾಗೃತಿ ಟ್ರಸ್ಟ್ ನ ಅಧಿಕಾರಿ ಕಣ್ಣನ್, […]
ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ

ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]
ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮಗಳ ವಿವರ –ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ […]
ಭರತನಾಟ್ಯ ಜೂನಿಯರ್ ಪರೀಕ್ಷೆ : ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಶೇ.೧೦೦ ರಷ್ಟು ಫಲಿತಾಂಶ

ಜನವಾಹಿನಿ NEWS ಸಿದ್ದಾಪುರ : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶೇ ೧೦೦ ರಷ್ಟು ಫಲಿತಾಂಶವನ್ನು ನೀಡಿದ್ದಾರೆ. ನೃತ್ಯ ಕಲಾ ಶಾಲೆಯ ಸಿದ್ದಾಪುರದ ವಿದ್ಯಾರ್ಥಿಗಳಾದ ಹೆಚ್.ಆರ್. ರ‍್ಷಿತ, ಕೆ.ಆರ್. ಅದಿತ್ರಿ, ವಿ.ಜೆ. ಸಿಂಚನ, ಹೆಚ್.ಎಲ್. ಧೃತಿಕ ಮತ್ತು ಕೆ.ಎಸ್. ಜೀಶ್ನ ಇವರುಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ನೃತ್ಯ ಕಲಾ ಶಾಲೆಯ ನೃತ್ಯ ಗುರು […]
ಭರತನಾಟ್ಯ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೀರ್ಥಪ್ರಿಯ

ಜನವಾಹಿನಿ NEWS ಸಿದ್ದಾಪುರ : 2024-25ನೇ ಸಾಲಿನ ಡಾಕ್ಟರ್ ಗಂಗೂಬಾಯಿ ಹಾನಗಲ್ ಸಂಗೀತ ಕಲಾ ವಿಶ್ವವಿದ್ಯಾಲಯ ಮೈಸೂರಿನಲ್ಲಿ ನಡೆದ ಜೂನಿಯರ್ ಭರತನಾಟ್ಯ ಪರೀಕ್ಷೆಯಲ್ಲಿ ಪಿ.ಎಂ.ಶ್ರೀ ನವೋದಯ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ ತೀರ್ಥಪ್ರಿಯ. ಎಂ ಬಿ, 94.5% ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ತೀಥಪ್ರಿಯಾ ಅವರು ಕಳೆದ ಆರು ವರ್ಷಗಳಿಂದ ಜಗನ್ಮೋಹನ ನಾಟ್ಯಾಲಯ, ಶಿಕ್ಷಕ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ನೃತ್ಯ ಕಲಿಯುತ್ತಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಕಲೆ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿರುವುದು ಅವರ ವೈಶಿಷ್ಟ್ಯ. […]
ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯ ಮಡಿಕೇರಿ : ವಿದ್ಯಾರ್ಥಿಯೋರ್ವ ತಾನು ತಂಗಿದ್ದ ಪಿಜಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಗಳ ಪುತ್ರ ಅಭಿ (20) ಯುವಕನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪುತ್ರ ಸುಳ್ಯದಲ್ಲಿ ಶಿಕ್ಷಣ ಪಡೆಯುತ್ತಿದ್ದ ಈತ ತಂಗಿದ್ದ PG ಯಲ್ಲಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ […]
ಕೊಡಗಿನಲ್ಲಿ ಕಾನೂನು ಪದವಿ ಕಾಲೇಜು ಪ್ರಾರಂಭ

ಮಡಿಕೇರಿ : ಗೋಣಿಕೊಪ್ಪಲು ಕಾವೇರಿ ಎಜುಕೇಷನ್‌ಸೊಸೈಟಿ ಆಧೀನದಲ್ಲಿರುವ ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜನ್ನು ಆರಂಭಿಸಲು ಅನುಮತಿ ದೊರೆತ್ತಿದ್ದು, ಆ.೨೮ರೊಳಗೆ ವಿದ್ಯಾರ್ಥಿಗಳು ನೋಂದಣಿ ಮಾಡಕೊಳ್ಳಬೇಕು ಎಂದು ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸುಗುಣ ಮುತ್ತಣ್ಣ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಪ್ರಾರಂಭಿಸಬೇಕು ಮತ್ತು ಇಲ್ಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಶಿಕ್ಷಣವನ್ನು ಕೊಡಿಸುವ ಪ್ರಯತ್ನದಲ್ಲಿ ಸಫಲರಾಗಿದ್ದೇವೆ. ಈ ನಿಟ್ಟಿನಲ್ಲಿ ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ವೀರಾಜಪೇಟೆಯ ಕಾವೇರಿ […]
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಾಕತೂರು ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನ : ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ ಪ್ರತಿಯೊಬ್ಬರಿಗೆ ಇರಬೇಕು : ಕವನ್ ಭೀಷ್ಮ

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಾಕತೂರು ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನ : ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ ಪ್ರತಿಯೊಬ್ಬರಿಗಿರಬೇಕು : ಕವನ್ ಭೀಷ್ಮ ಮಡಿಕೇರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಎಪ್ಪತ್ತೊಂಭತ್ತನೇ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಹಾಕತ್ತೂರು ಪ್ರೌಢಶಾಲೆಯಲ್ಲಿ ಕಳೆದ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶ ಶೇ.ನೂರು ಬರಲು ಕಾರಣಕರ್ತರಾದ ಶಾಲಾ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಳಿಯ ದಾನಿಗಳಾದ ಕವನ್ ಭೀಷ್ಮ ಮಾತನಾಡಿ, ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ […]
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುಶಾಲನಗರ : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಎನ್.ಎಸ್.ಎಸ್, ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ವಿದ್ಯಾರ್ಥಿ ಸಂಘ ಹಾಗೂ ಎಸ್ ಡಿ ಎಂ ಸಿ ಸಹಯೋಗದಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ- ಸಡಗರದಿಂದ ಆಚರಿಸಲಾಯಿತು.