Breaking News :

ಸೋಮವಾರಪೇಟೆ186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

  ಜನವಾಹಿನಿ NEWS ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ಇಂದು 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಾಲೊಮನ್ ಡೇವಿಡ್ ಮಾತನಾಡಿ ಪ್ರತಿ ವರ್ಷದಂತೆ ಇ ಬಾರಿಯು ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನ […]

ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

  ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್‌ಸಿಸಿ ಕೆಡೆಟ್‌ಗಳು ಶಿಸ್ತಿನ ತರಬೇತಿ, […]

ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ : ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಪ್ರಯತ್ನ : ಬಸವರಾಜು

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕ ( ಆಡಳಿತ ) ರಾಗಿ (ಡಿಡಿಪಿಐ ಆಗಿ) ಬಸವರಾಜು ಸೋಮವಾರ (ಸೆ.1 ರಂದು) ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ಇದೀಗ ಬೇರೆಡೆಗೆ ವರ್ಗಾವಣೆಗೊಂಡಿರುವ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ […]

ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ನ ಪಾತ್ರ ಮಹತ್ತರವಾದದ್ದು : ರೆ.ಫಾ.ಅವಿನಾಶ್

  ಜನವಾಹಿನಿ NEWS ಸೋಮವಾರಪೇಟೆ : ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು, ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಜಿಲ್ಲಾ […]

ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಉಪ ಅಧೀಕ್ಷಕರು

    ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ‌ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು […]

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

  ಜನವಾಹಿನಿ NEWS  : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]

ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸಂಸ್ಥೆಯಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಕಲಿಕೋಪಕರಣ, ಕ್ರೀಡಾ ಸಾಮಗ್ರಿ ವಿತರಣೆ

  ಜನವಾಹಿನಿ NEWS ಸಿದ್ದಾಪುರ: ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳ ಮನಸ್ಸಿನಲ್ಲಿ ನಗುವು ಮತ್ತು ಕಲಿಕೆಯ ಬೆಳಕು ತುಂಬುವ ಕಾರ್ಯವನ್ನು ಜಾಗೃತಿ ಟ್ರಸ್ಟ್ ಹಾಗೂ ಸಿಸ್ಕೋ ಸ್ವಯಂಸೇವಕರು ಯಶಸ್ವಿಯಾಗಿ ನೆರವೇರಿಸಿದರು. ಆಗಸ್ಟ್ ತಿಂಗಳಲ್ಲಿ ನಡೆದ ಅಭಿಯಾನದಲ್ಲಿ 85 ಸಿಸ್ಕೋ ಸ್ವಯಂಸೇವಕರು ಪಾಲ್ಗೊಂಡು, ಐದು ಸರ್ಕಾರಿ ಶಾಲೆಗಳ 600ಕ್ಕೂ ಹೆಚ್ಚು ಮಕ್ಕಳಿಗೆ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಿದರು. ಆಗಸ್ಟ್ 14ರಂದು ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳಿಗೆ […]

ಯುವನಿಧಿ ಭಿತ್ತಿ ಪತ್ರ ಬಿಡುಗಡೆ

  ಜನವಾಹಿನಿ NEWS ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ. ಬಿ ಅವರು ಮಾತಾನಾಡಿ 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ […]

ಸಿಸ್ಕೊ ಸಂಸ್ಥೆಯಿಂದ ಹೆಗ್ಗಳ ಶಾಲೆಗೆ ಕೊಡುಗೆ

  ಜನವಾಹಿನಿ NEWS ವಿರಾಜಪೇಟೆ : ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಜಾಗೃತಿ ಹಾಗೂ ಸಿಸ್ಕೊ ಸಂಸ್ಥೆಯ ಸ್ವಯಂ ಸೇವಕರು ಆಗಮಿಸಿ ವಿದ್ಯಾರ್ಥಿಗಳಿಗೆ ಆಟದ ವಸ್ತುಗಳು, ಡ್ರಾಯಿಂಗ್ ಚಾರ್ಟ್, ಲೇಖನಿ, ಶಾಲೆಗೆ ಪೈಂಟಿಂಗ್, ಹಾಗೂ ಆಹಾರದ ಕಿಟ್ ಗಳನ್ನು ವಿತರಿಸಿದರು. ಮಾತ್ರವಲ್ಲದೆ ಮಕ್ಕಳಿಗೆ ಮದ್ಯಾಹ್ನ ದ ಉಪಹಾರದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಿದರು. ಒಟ್ಟು ಇಪ್ಪತ್ತು ಸ್ವಯಂ ಸೇವಕರನ್ನು ಒಳಗೊಂಡ ತಂಡದಲ್ಲಿ ಸಿಸ್ಕೊ ಸಂಸ್ಥೆಯ ಮಚ್ಚಾರಂಡ ಅಯ್ಯಪ್ಪ, ಜಾಗೃತಿ ಟ್ರಸ್ಟ್ ನ ಅಧಿಕಾರಿ ಕಣ್ಣನ್, […]

ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ 

  ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ  ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]