Breaking News :

ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ 

ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ ಮಡಿಕೇರಿ : ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025 ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಮಾತನಾಡಿ 2023, 2024 ಮತ್ತು 2025 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು […]

ಅಂಗನವಾಡಿ ಕಾರ್ಯಕರ್ತೆ ಬಿ.ಕೆ.ಸುಶೀಲ ರವರಿಗೆ ಬೀಳ್ಕೊಡುಗೆ 

ಅಂಗನವಾಡಿ ಕಾರ್ಯಕರ್ತೆ ಬಿ.ಕೆ.ಸುಶೀಲ ಅವರಿಗೆ ಬೀಳ್ಕೊಡುಗೆ ಮಡಿಕೇರಿ : ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾರ್ಯ ನಿರ್ವಹಿಸಿ ನಿವೃತ್ತರಾದ ಕಾರ್ಯಕರ್ತೆ ಬಿ.ಕೆ. ಸುಶೀಲ ಅವರನ್ನು ಮರಗೋಡು ವೃತ್ತದ ಕಾರ್ಯಕರ್ತರು ಹಾಗೂ ಸಹಾಯಕಿಯರು ಸನ್ಮಾನಿಸಿ ಬೀಳ್ಕೊಟ್ಟರು.

ಕಾವಾಡಿಯಲ್ಲಿ ಕಥೆ ಹೇಳುವ ಸ್ಪರ್ಧೆ : ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ – ಬಾಚರಣಿಯಂಡ .ಪಿ.ಅಪ್ಪಣ್ಣ.

  ವಿರಾಜಪೇಟೆ ತಾಲೂಕು ಪತ್ರಕತ೯ರ ಸಂಘ , ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್ ನಿಂದ ಕಥಾ ಸಮಯ   ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ – ಬಾಚರಣಿಯಂಡ ಪಿ. ಅಪ್ಪಣ್ಣ ಮಡಿಕೇರಿ : ಜಾನಪದ ಕಥೆಗಳು ಪ್ರಕೖತ್ತಿಯಲ್ಲಿನ ನೈಜ ಪುಷ್ಪಗಳಂತೆ ಸದಾ ಪರಿಮಳ ಬೀರುತ್ತಾ ಕಥಾ ಲೋಕದಲ್ಲಿ ಕಂಗೊಳಿಸುತ್ತದೆ. ಹೀಗಾಗಿ ಜಾನಪದ ಕಥೆಗಳು ಜನರ ಕಥೆಗಳಾಗಿ ಅತ್ಯಂತ ಮಹತ್ವ ಪಡೆಯುತ್ತದೆ. ಜಾನಪದೀಯ ಮೂಲದ ಕಥೆಗಳನ್ನು ಎಂದಿಗೂ ಮರೆಯಬಾರದು ಎಂದು ತ್ರಿಭಾಷಾ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಕಥೆಗಾರರಿಗೆ ಕರೆ […]

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್

ವಿಶ್ವ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಪಾಲ್ಗೊಳ್ಳಲಿರುವ ಹೊನಲಿ ಕಿಶೋರ್ ಗೆ ಅಭಿನಂದಿಸಿದ ಮಂತರ್ ಮಡಿಕೇರಿ : ಮಲೇಶಿಯಾದ ಕೌಲಾಲಂಪುರದಲ್ಲಿ ಆಗಸ್ಟ್ 7ರಂದು ನಡೆಯಲಿರುವ ಇಂಟರ್ನ್ಯಾಷನಲ್ ಟೆಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸುತ್ತಿರುವ ಸೋಮವಾರಪೇಟೆ ಮೂಲದ ವಿದ್ಯಾರ್ಥಿನಿ ” ಹೊನಲಿ ಕಿಶೋರ್” ರವರನ್ನು ಶಾಸಕ ಮಂತರ್ ಗೌಡ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭಹಾರೈಸಿದರು.

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ

ರಾಷ್ಟ್ರೀಯ ಹಾಕಿ : ಕರ್ನಾಟಕ ತಂಡದ ಗೋಲ್ ಕಿಪರ್ ಆಗಿ ಕೊಡಗಿನ ಶ್ರಾವ್ಯ ದೇವಯ್ಯ ಆಯ್ಕೆ ಮಡಿಕೇರಿ : ರಾಷ್ಟ್ರೀಯ ಮಹಿಳಾ ಜೂನಿಯರ್ ಹಾಕಿ ಕರ್ನಾಟಕ ತಂಡದ ಗೋಲ್ ಕೀಪರ್ ಆಗಿ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ಆಗಸ್ಟ್. 1ರಿಂದ 12ರವರೆಗೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆಯುವ ರಾಷ್ಟ್ರೀಯ ಮಹಿಳಾ ಜೂನಿಯರ್ ಕರ್ನಾಟಕ ಹಾಕಿ ತಂಡದ ಗೋಲ್ ಕೀಪರ್ ಆಗಿ ಶ್ರಾವ್ಯ ದೇವಯ್ಯ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುಪುರ್ ಜಿವಿಜಿ ಕಾಲೇಜಿನಲ್ಲಿ ವ್ಯಾಸಂಗ […]

ಇಂಡಿಯಾದ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ

ಇಂಡಿಯಾ ಸಬ್ ಜೂನಿಯರ್ ಹಾಕಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಮಂಡೆಪಂಡ ಕಾಳಪ್ಪ ಆಯ್ಕೆ ಸಬ್ ಜೂನಿಯರ್ ಇಂಡಿಯಾ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಅಮ್ಮತಿ ಹೋಬಳಿ ಕಾವಾಡಿ ಗ್ರಾಮದ ಮಂಡಪಂಡ ಕಾಳಪ್ಪ ಕರ್ನಾಟಕ ತಂಡದಲ್ಲಿ ಆಡಲು ಆಯ್ಕೆಯಾಗಿದ್ದಾರೆ. 15ನೇ ಸಬ್ ಜೂನಿಯರ್ ವಿಭಾಗದ ರಾಷ್ಟ್ರೀಯ ಚಾಂಪಿಯನ್ ಶಿಪ್ 2025 ಪಂದ್ಯಾಟವು ಆಗಸ್ಟ್ 1ರಿಂದ 12ರ ವರೆಗೆ ತಮಿಳುನಾಡಿನ ಚೆನೈಯಲ್ಲಿ ನಡೆಯಲಿದೆ. ಅಮ್ಮತಿ ಹೋಬಳಿಯ ಕಾವಾಡಿ ಗ್ರಾಮದ ಮಂಡೆಪಂಡ ಲವ ಹಾಗೂ ಶಬೀತ ( ತಾಮನೆ ಮಾಣಿಪಂಡ) ದಂಪತಿಯಾ ಪುತ್ರರಾಗಿರುವ […]

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ

ವಸತಿ ಶಾಲೆ ನಿರ್ಮಾಣಕ್ಕೆ ಸರ್ಕಾರದಿಂದ ಅನುಮೋದನೆ : ಸಚಿವರಿಗೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ಸೋಮವಾರಪೇಟೆ ತಾಲ್ಲೂಕಿನ ಚನ್ನಾಪುರದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ ವತಿಯಿಂದ 6 ನೇ ತರಗತಿಯಿಂದ 12 ನೇ ತರಗತಿಯವರೆಗೆ 37.55 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ವಸತಿ ಶಾಲೆ ನಿರ್ಮಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾರ್ಮಿಕ ಇಲಾಖೆ […]

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ

ಶಿಕ್ಷಕಿ ಬಿ.ಬಿ ಜಾಜಿ ಅವರಿಗೆ ಕಾವೇರಿ ರತ್ನ ಪ್ರಶಸ್ತಿ ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಾಜಿ ಬಿ.ಬಿ ಅವರು ಕಾವೇರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ, ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್, ಸಂಗಮ ಟಿ.ವಿ., ವಂಶಿ ನ್ಯೂಸ್ ಹಾಗೂ ರಾಷ್ಟ್ರೀಯ ಅಪರಾದ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ಬೆಂಗಳೂರು ಇವರ ಸಹಯೋಗದೊಂದಿಗೆ ನಡೆಯಲಿರುವ ಅಂತರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ […]

ಪದವಿ ಫಲಿತಾಂಶದಲ್ಲಿ ಸಂಶುಲ್ ಉಲಮ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಪದವಿ ಫಲಿತಾಂಶದಲ್ಲಿ ಸಂಶುಲ್ ಉಲಮ ಕಾಲೇಜು ವಿದ್ಯಾರ್ಥಿಗಳ ಸಾಧನೆ ವಿರಾಜಪೇಟೆ : ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ವಿರಾಜಪೇಟೆ ತಾಲ್ಲೂಕಿನ ಪೇರುಂಬಾಡಿಯ ಸಂಸಲ್ ಉಲಮ ಎಜುಕೇಶನಲ್ ಅಕಾಡೆಮಿಯ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಕಾಂ ವಿಭಾಗದಲ್ಲಿ ಶೇ100ರ ಫಲಿತಾಂಶ ಪಡೆದು ನಾಲ್ವರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ 2024- 25 ನೇ ಸಾಲಿನ ಫಲಿತಾಂಶದಲ್ಲಿ ಅಂತಿಮ ಬಿ.ಕಾಂ ವಿಭಾಗದಲ್ಲಿ  ವಿದ್ಯಾರ್ಥಿನಿ ಜಸೀಲ ಎಂ. ಕೆ. ಶೇ 93ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ, ನೇಹಾ ಶೇ 90ರಷ್ಟು ಅಂಕಗಳನ್ನು ಗಳಿಸಿ […]

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ 

ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ಕೆ. ಎಸ್. ತಮ್ಮಯ್ಯ ಅವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ  ವಿರಾಜಪೇಟೆ : ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ […]