ಮೂರ್ನಾಡು : ಕೈಲ್ ಮುಹೂರ್ತ ಹಬ್ಬದ ಆಟೋಟ

ಜನವಾಹಿನಿ NEWS ಮೂರ್ನಾಡು : ಇಲ್ಲಿನ ನಂ.೪೩೯ನೇ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ತೆಂಗಿನಕಾಯಿಗೆ ಗುಂಡು ಹೊಡೆಯುವುದರ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಪೊಲೀಸ್ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿ ಚಾಲನೆ ನೀಡಿದರು. ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿ ಕೊಡಗಿನ ಯುವಜನತೆ ಎಲ್ಲರೂ ಕ್ರೀಡಾಪುಟುಗಳಾಗಬೇಕು. ಮೂರ್ನಾಡು ಪಕ್ಕದಲ್ಲಿಯೆ ಅಂತರಾಷ್ಟ್ರೀಯ […]
ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ

ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]
ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]
ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

ಜನವಾಹಿನಿ NEWS : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]
ಸೆ.19ರಂದು ರಾಜ್ಯ ಮಟ್ಟದ ಕಿವುಡರ ಸಂಘದ ಕ್ರೀಡಾಕೂಟ

ಜನವಾಹಿನಿ NEWS ವಿರಾಜಪೇಟೆ : ಗೋಣಿಕೊಪ್ಪಲುವಿನ ಕಾಲ್ಸ್ ಶಾಲಾ ಮೈದಾನದಲ್ಲಿ ಸೆಪ್ಟೆಂಬರ್ 19 ರಂದು ಕಿವುಡ ಸಮುದಾಯದ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಗೌರವ ಅಧ್ಯಕ್ಷ ಜೋಸೆಫ್ ಸ್ಯಾಮ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಿವುಡ ಸಮುದಾಯದ ಸಬಲಿಕರಣಕ್ಕಾಗಿ ನಮ್ಮ ಸಂಘವು ಎಂಟು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಕಿವುಡ ರ ವಯುಕ್ತಿಕ ಬೆಳವಣಿಗೆ ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ 2025ರ […]
ದೇಶದ ಅಭಿವೃದ್ದಿಯಲ್ಲಿ ಕೃಷಿ ಕ್ಷೇತ್ರದ ಕೊಡುಗೆ ಅಪಾರ : ಸಂಸದ ಯದುವೀರ್

ಜನವಾಹಿನಿ NEWS ಸೋಮವಾರಪೇಟೆ : ಇಲ್ಲಿನ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ, ಸಮೀಪದ ಹುದುಗೂರು ಗ್ರಾಮದ ಕಾಳಿಕಾಂಬ ಯುವಕ ಸಂಘದ ಸಹಯೋಗದೊಂದಿಗೆ ಗ್ರಾಮದ ಐಮುಡಿಯಂಡ ಗಣೇಶ್ ಅವರ ಗದ್ದೆಯಲ್ಲಿ ಆಯೋಜಿಸಿದ್ದ 7 ನೇ ವರ್ಷದ ನಾಟಿ ಹಬ್ಬ ಹಾಗೂ ಕೆಸರು ಗದ್ದೆ ಕ್ರೀಡಾಕೂಟವನ್ನು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು. ನಂತರ ಮಾತನಾಡಿದ ಸಂಸದ ಯದುವೀರ್ ಅವರು, ದೇಶದ ಅಭಿವೃದ್ದಿಯಲ್ಲಿ ಕೃಷಿ ಕ್ಷೇತ್ರ ಮಹತ್ತರ ಪಾತ್ರ ವಹಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಯುವ ಜನಾಂಗ ಉದ್ಯೋಗ ಸೇರಿದಂತೆ ಇನ್ನಿತರ […]
ಭರತನಾಟ್ಯ ಜೂನಿಯರ್ ಪರೀಕ್ಷೆ : ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಶೇ.೧೦೦ ರಷ್ಟು ಫಲಿತಾಂಶ

ಜನವಾಹಿನಿ NEWS ಸಿದ್ದಾಪುರ : ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಭಾರತೀಯ ನೃತ್ಯ ಕಲಾ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶೇ ೧೦೦ ರಷ್ಟು ಫಲಿತಾಂಶವನ್ನು ನೀಡಿದ್ದಾರೆ. ನೃತ್ಯ ಕಲಾ ಶಾಲೆಯ ಸಿದ್ದಾಪುರದ ವಿದ್ಯಾರ್ಥಿಗಳಾದ ಹೆಚ್.ಆರ್. ರ‍್ಷಿತ, ಕೆ.ಆರ್. ಅದಿತ್ರಿ, ವಿ.ಜೆ. ಸಿಂಚನ, ಹೆಚ್.ಎಲ್. ಧೃತಿಕ ಮತ್ತು ಕೆ.ಎಸ್. ಜೀಶ್ನ ಇವರುಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಭಾರತೀಯ ನೃತ್ಯ ಕಲಾ ಶಾಲೆಯ ನೃತ್ಯ ಗುರು […]
ನಾಳೆ ಭಾಗಮಂಡಲದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ, ಇವರ ಸಂಯುಕ್ತ ಆಶ್ರಯದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವು (ಆಗಸ್ಟ್, 23 ರಂದು) ನಾಳೆ ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು […]
ಭರತನಾಟ್ಯ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೀರ್ಥಪ್ರಿಯ

ಜನವಾಹಿನಿ NEWS ಸಿದ್ದಾಪುರ : 2024-25ನೇ ಸಾಲಿನ ಡಾಕ್ಟರ್ ಗಂಗೂಬಾಯಿ ಹಾನಗಲ್ ಸಂಗೀತ ಕಲಾ ವಿಶ್ವವಿದ್ಯಾಲಯ ಮೈಸೂರಿನಲ್ಲಿ ನಡೆದ ಜೂನಿಯರ್ ಭರತನಾಟ್ಯ ಪರೀಕ್ಷೆಯಲ್ಲಿ ಪಿ.ಎಂ.ಶ್ರೀ ನವೋದಯ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ ತೀರ್ಥಪ್ರಿಯ. ಎಂ ಬಿ, 94.5% ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ತೀಥಪ್ರಿಯಾ ಅವರು ಕಳೆದ ಆರು ವರ್ಷಗಳಿಂದ ಜಗನ್ಮೋಹನ ನಾಟ್ಯಾಲಯ, ಶಿಕ್ಷಕ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ನೃತ್ಯ ಕಲಿಯುತ್ತಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಕಲೆ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿರುವುದು ಅವರ ವೈಶಿಷ್ಟ್ಯ. […]
ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ

ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಮಡಿಕೇರಿ : ಈಶ ಫೌಂಡೇಶನ್ ವತಿಯಿಂದ 17ನೇ ಆವೃತ್ತಿಯ ಈಶ ಗ್ರಾಮೋತ್ಸವ ಅಂಗವಾಗಿ ರೂರಲ್ ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಈಶ ಫೌಂಡೇಶನ್‌ನ ಸ್ವಯಂ ಸೇವಕ ಎಂ.ಎನ್.ಅಖಿಲ್, ಆ.24ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೊದಲ ಹಂತದಲ್ಲಿ(ಕ್ಲಸ್ಟರ್ ವಿಭಾಗ) ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿದೆ. […]