Breaking News :

ಕೊಡಗಿನ ಹಿರಿಯ ಹಾಕಿ ತರಬೇತುದಾರ, ಸಮಾಜ ಸೇವಕ ಪುಚ್ಚಿಮಡ ಹರೀಶ್ ಅಸ್ತಂಗತ

  ಜನವಾಹಿನಿ News ಪೊನ್ನಂಪೇಟೆ : ಪೊನ್ನಂಪೇಟೆಯ ನಿವಾಸಿ ಕೊಡುಗೈದಾನಿ ಪುಚ್ಚಿಮಡ ದಿವಂಗತ ಬೊಪಯ್ಯ ಅವರ ಜೇಷ್ಠ ಪುತ್ರ ಹಿರಿಯ ಹಾಕಿ ತರಬೇತಿದಾರರು, ಸಮಾಜ ಸೇವಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಪುಚ್ಚಿಮಡ ಹರೀಶ್ ಅನಾರೋಗ್ಯದಿಂದ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಸೇರಿದಂತೆ ಇಬ್ಬರು ಪುತ್ರಿಯರು ಓರ್ವ ಪುತ್ರ, ಸಹೋದರ ಹಾಗು ಕುಟುಂಬ ವರ್ಗದವರು, ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಪೊನ್ನoಪೇಟೆಯಲ್ಲಿ ಟ್ಯುಟೋರಿಯಲ್ ನಡೆಸುತ್ತಿದ್ದ ಸಂದರ್ಭ ಹಲವರಿಗೆ ವಿದ್ಯಾ ಧಾನವನ್ನು ಮಾಡಿದ್ದಾರೆ. ಸ್ವತಹ ಹಾಕಿ ಪಟ್ಟುವಾದ […]

ಏ.24ರಿಂದ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ಕ್ರಿಕೆಟ್ ಪಂದ್ಯಾವಳಿ

ಜನವಾಹಿನಿ News ಮಡಿಕೇರಿ : ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ ಕೊಡವ ಜಮ್ಮಾ ಮುಸ್ಲಿಂ ಸ್ಫೋರ್ಟ್ಸ್ ಮತ್ತು ಕಲ್ಚರಲ್ ಅಸೋಷಿಯೇಷನ್ ಆಶ್ರಯದಲ್ಲಿ ಕೊಡವ ಜಮ್ಮಾ ಮುಸ್ಲಿಂ ಸಮಾಜಬಾಂದವರಿಗೆ ೩ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟವನ್ನು ೨೦೨೬ರ ಏ.೨೪ರಿಂದ ಮೇ.೧ರವರೆಗೆ ಎಸ್.ಎಂ.ಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷ ಉಸ್ಮಾನ್ ತಿಳಿಸಿದರು. ಮೊದಲ ವರ್ಷ ಕುವಲೆರ ಚಾಮಿಯಾಲ ಕುಟುಂಬ ಮತ್ತು ಎರಡನೇ ಪರ್ಷ ಆಲಿರ ಕುಟುಂಬಸ್ಥರು ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಿದ್ದು, ೭೦ ಕುಟುಂಬಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ […]

ಜ.10, 11ರಂದು ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಜನವಾಹಿನಿ News ಮಡಿಕೇರಿ : ಶ್ರೀ ರಾಜೇಶ್ವರಿ ವಿದ್ಯಾಲಯ ಮತ್ತು ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಜ.೧೦,೧೧ ರಂದು ನಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಅಧ್ಯಕ್ಷ ಗೋವಿಂದರಾಜ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಜೇಶ್ವರಿ ವಿದ್ಯಾಲಯದಲ್ಲಿ ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಹಳೆ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಎಸ್‌ಆರ್‌ವಿ ಕನೆಕ್ಟ್-ಹಳೆ […]

ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಲೀಗ್ ಗೆ ಶಾಸಕ ಪೊನ್ನಣ್ಣರಿಂದ ಚಾಲನೆ 

  ಜನವಾಹಿನಿ News ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ಜರಗಿತು. ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ. ಈ ಪಂದ್ಯಾಟವು ವಕೀಲರಿಗೆ ಹಬ್ಬದ […]

ಏ.೨ರಿಂದ ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ 

  ಜನವಾಹಿನಿ News ಮಡಿಕೇರಿ : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ ೨೪ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆಗೆ ಮುಂದಾಗಿದ್ದು, .ಏ೨ರಿಂದ ಪಂದ್ಯಾಟ ಆರಂಭವಾಗಲಿದೆ ಎಂದು ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ ಸಮಿತಿ ಅಧ್ಯಕ್ಷ ಎಂ.ಸುರೇಶ್ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೬ರ ಕ್ರಿಕೆಟ್ ಉತ್ಸವದ ಜವಾಬ್ದಾರಿಯನ್ನು ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಹೊತ್ತಿದ್ದು, ಏ.೨ರಿಂದ ೨೮ ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಉತ್ಸವ ಸಮಿತಿಯನ್ನು ರಚಿಸಿದ್ದು, […]

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

  ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]

ಏ.2 ರಿಂದ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆ

  ಜನವಾಹಿನಿ News ಮಡಿಕೇರಿ : ಮುಲ್ಲೇಂಗಡ ಒಕ್ಕದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆಯನ್ನು ೨೦೨೬ರ ಏ.೨,೩,೪ ರಂದು ಕಂಡಂಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ತಾಲೂಕು ಕಂಡಂಗಾಲ ಗ್ರಾಮದಲ್ಲಿ ಮುಲ್ಲೇಂಗಡ ಒಕ್ಕ ಐನ್ ಮನೆ ಹೊಂದಿದೆ. ಕೊಡವ ಸಮುದಾಯಬಾಂಧವರಿಗೆ ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಇತ್ಯಾದಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಉತ್ತೇಜಿಸು ನಿಟ್ಟಿನಲ್ಲಿ […]

ಕಾಫಿ ತೋಟಗಳ ನಡುವೆ ಶರ ವೇಗದಲ್ಲಿ ಪೈಪೋಟಿ ನೀಡಿದ ರ್‍ಯಾಲಿ ಪಟುಗಳು – ಕಾರುಗಳ  ಪೈಪೋಟಿಗೆ ಪ್ರೇಕ್ಷಕರು ಫುಲ್ ಫಿದಾ 

ಚಾಲನೆ ಸಂದರ್ಭ ಪಲ್ಟಿಯಾದ ಎರಡು ಕಾರು – 2ನೇ ದಿನ ತಾಂತ್ರಿಕ ದೋಷದಿಂದ ಹೊರಗುಳಿದ 10ಕ್ಕೆೊ ಹೆಚ್ಚು ಕಾರುಗಳು ಜನವಾಹಿನಿ News ಮಡಿಕೇರಿ :  ಬ್ಲೂ ಬ್ಯಾಂಡ್  ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಶಿಪ್ ನೇತೃತ್ವದಲ್ಲಿ  ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಾಹಕಾರದೊಂದಿಗೆ ರೋಬಸ್ಟಾ 2025 ರ್‍ಯಾಲಿಯು ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ  ಸಂಚರಿಸಿ  ಗುರಿ ಮುಟ್ಟಲು ಅರಸಹಾಸ ಪಟ್ಟಲು.  ನಿಗದಿತ ಸಮಯ ಮುಟ್ಟಲು ತಾ ಮುಂದು ನಾ ಮುಂದು ಎಂಬಂತೆ   ಕಾರುಗಳು ಸರವೇಗದಲ್ಲಿ […]

ಇಯರ್ ಎಂಡ್ ಕ್ರಿಕೆಟ್ ಕಪ್ : ಪ್ರತಿಭೆಗಳನ್ನು ಗುರುತಿಸಲು, ಉತ್ತಮ ಬಾಂಧವ್ಯ ಬೆಳೆಯಲು ಕ್ರೀಡೆ ಸಹಕಾರಿ : ವಕೀಲ ಪ್ರಶಾಂತ್

  ಜನವಾಹಿನಿ News ಮಡಿಕೇರಿ : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬಾಂಧವ್ಯ ಬೆಳೆಯುತ್ತೆ, ಜತೆಗೆ ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಸಹಕಾರಿ ಆಗುದರ ಜತೆಗೆ ಪ್ರತಿಭೆಗಳನ್ನು ಗುರುತಿಸಲು ಕೂಡ ಅನುಕೂಲವಾಗುತ್ತೆ ಎಂದು ಅಮ್ಮತ್ತಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಕೀಲ ಪ್ರಶಾಂತ್ ಅಭಿಪ್ರಾಯಪಟ್ಟರು. ಟೀಂ ರೆಟ್ರೋ ವತಿಯಿಂದ ಇಂಜಿಲಗೆರೆ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ, ಇಯರ್ ಎಂಡ್ ಕ್ರಿಕೆಟ್ ಕಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಿಬ್ಬನ್ ಕಟ್ ಮಾಡಿದ ಬಳಿಕ ಬ್ಯಾಟಿಂಗ್ ಮಾಡುವ […]

ಕ್ರೀಡೆಗೆ ಸರಕಾರ ಕೋಟ್ಯಾಂತರ ಅನುದಾನ ನೀಡಿದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು : ಶಾಸಕ ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಭಾಗವಹಿಸಿದ್ದರು. ಕ್ರಿಕೆಟ್ ಆಟಗಾರರಿಗೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ […]