Breaking News :

ರಾಜ್ಯಪಾಲರನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ರಾಷ್ಟ್ರಪತಿಗಳಿಗೆ ಒಮ್ಮತದ ಒತ್ತಾಯ

ರಾಜ್ಯ ಸರ್ಕಾರದ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸುತ್ತಿರುವ ರಾಜ್ಯಪಾಲ ಗೆಹ್ಲೂಟ್ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ಬಳಿಗೆ ನಿಯೋಗ ಕೊಂಡೊಯ್ಯಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಗ್ರಹಿಸಿದೆ. 

ಈ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ಬಳಿಗೆ ನಿಯೋಗ ಒಯ್ಯಬೇಕು ಎಂಬ ಬಗ್ಗೆ ಹೈಕಮಾಂಡ್ ಜತೆ ಶುಕ್ರವಾರ ಚರ್ಚಿಸುವೆ. ಹೈಕಮಾಂಡ್ ಸಲಹೆಯಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪ್ರಾಸಿಕ್ಯೂಷನ್ ವಿಚಾರದಲ್ಲಿ ವಿವೇಚನಾರಹಿತ ನಿರ್ಧಾರ ಹಾಗೂ ತಾರತಮ್ಯ ಧೋರಣೆ ಅನುಸರಿಸಿರುವ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳ ಬಳಿಗೆ ನಿಯೋಗ ತೆರಳುವ ಬಗ್ಗೆ ಹೈಕಮಾಂಡ್ ಜೊತೆ ಮಾತುಕತೆ ನಡೆಸುವುದಾಗಿ ಸಿಎಂ ಹೇಳಿದ್ದಾರೆ.

Share this article

ಟಾಪ್ ನ್ಯೂಸ್

More News