Breaking News :

ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪತಿ

ಪತ್ನಿಯನ್ನು  ಚೂರಿಯಿಂದ ಇರಿದು ಪತಿ ಕೊಲೆ ಮಾಡಿರುವ ಘಟನೆ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಫಾತಿಮಾ‌ (34) ಕೊಲೆಯಾದ ಮಹಿಳೆ. ಈಕೆಯ ಪತಿ ತಬ್ರೇಜ್ ಪಾಷಾ ಕೊಲೆ ಮಾಡಿ ಪರಾರಿಯಾಗಿದ್ದಾನೆ‌.

ಕೌಟುಂಬಿಕ ವಿಚಾರವಾಗಿ ಹಲವು ದಿನಗಳಿಂದ ಪತಿ- ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ಕುಟುಂಬದ ಹಿರಿಯರು ಬುದ್ಧಿ ಹೇಳಿ ಸಂಸಾರ ನಡೆಸಿಕೊಂಡು ಹೋಗುವಂತೆ ಬುದ್ಧಿ ಹೇಳುತ್ತಿದ್ದರು. ಆದರೆ, ಇಂದು ಬೆಳಗ್ಗೆ ಕೂಡ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಬೆಳಗ್ಗೆ 8.30ರ ಸುಮಾರಿಗೆ ತಬ್ರೇಜ್ ಪಾಷಾ ಹೆಂಡಿತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ನೋಡಿದಾಗ ಕೊಲೆ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

Share this article

ಟಾಪ್ ನ್ಯೂಸ್

More News