Breaking News :

ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ; ರಾಜ್ಯಪಾಲರಿಗೆ ಎಚ್ಚರಿಸಿದ ಐವನ್ ಡಿಸೋಜಾ, ಬಿಜೆಪಿಯಿಂದ ಆಕ್ಷೇಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.

ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ  ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾತನಾಡಿದ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಸಿದ್ದಾರೆ.

ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ ಮುಂದಿನ ಹೆಜ್ಜೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ರಾಜ್ಯಪಾಲರು ಕೂಡಲೇ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಪಾಲರ ಕಚೇರಿಯನ್ನು ವಶಪಡಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಐವನ್ ಡಿಸೋಜಾ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೊಲೀಸರಿಗೆ ಒತ್ತಾಯಿಸಿದೆ.

Share this article

ಟಾಪ್ ನ್ಯೂಸ್

More News