Breaking News :

ಕಡಬ; ಕೊಂತೂರು ಶಾಲಾ ಮೇಲ್ಛಾವಣಿ ಕುಸಿದು ಮಕ್ಕಳಿಗೆ ಗಾಯ ಪ್ರಕರಣ; ಮುಖ್ಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಿದ ಡಿಸಿ ಮುಲ್ಲೈ ಮುಗಿಲನ್

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ ಪುತ್ತೂರು ಬಿಇಒ ಲೋಕೇಶ್‌ ಎಸ್‌.ಆರ್‌.ಅವರು ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಅನೇಕ ಮಕ್ಕಳು ಶಾಲೆಯ ಹೊರಗೆ ಇದ್ದರು. ಒಳಗೆ ಕೆಲವೇ ಮಕ್ಕಳಿದ್ದರು. ಅದರಲ್ಲಿ ನಾಲ್ವರು ಹೆಣ್ಣುಮಕ್ಕಳಿಗೆ ಗಾಯಗಳಾಗಿವೆ ಎಂದು ಬಿಇಒ ತಿಳಿಸಿದ್ದಾರೆ. ಅಷ್ಟೇ ಅಲ್ಲ ಈ ಸರ್ಕಾರಿ ಶಾಲೆ ಸುಮಾರು 74 ವರ್ಷಗಳಷ್ಟು ಹಳೆಯದು. ಇದನ್ನು ದುರಸ್ತಿ ಮಾಡುವ ಸಲುವಾಗಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿತ್ತು.

ಶಾಲೆಯಲ್ಲಿನ ಅನಾಹುತವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಆ ಶಾಲೆಯ ಮುಖ್ಯ ಶಿಕ್ಷಕರನ್ನು ಮತ್ತು ಕಾಮಗಾರಿ ಹೊಣೆ ಹೊತ್ತಿದ್ದ ಜ್ಯೂನಿಯರ್‌ ಎಂಜಿನಿಯರ್‌ನನ್ನು ವಿಚಾರಣೆಗಾಗಿ ಅಮಾನತುಗೊಳಿಸಿದ್ದಾರೆ. ಘಟನೆ ಬಗ್ಗೆ ಮಾತನಾಡಿದ ಅವರು ಕಾಮಗಾರಿ ನಡೆಯುತ್ತಿದೆ ಎಂದ ಮೇಲೆ ಮುಖ್ಯ ಶಿಕ್ಷಕರು ಹೆಚ್ಚು ಎಚ್ಚರಿಕೆ ವಹಿಸಬೇಕು. ಸ್ಥಳಕ್ಕೆ ಮಕ್ಕಳು ಹೋಗದಂತೆ ನೋಡಿಕೊಳ್ಳಬೇಕು. ಕಾಮಗಾರಿ ಶುರುಮಾಡುವುದಕ್ಕೂ ಮೊದಲೇ ಈ ಬಗ್ಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ಕೊಟ್ಟಿದ್ದೇವೆ. ಮಕ್ಕಳು ಕೊಠಡಿಯಲ್ಲಿ ಇಲ್ಲ ಎಂಬುದನ್ನು ಖಚಿತ ಪಡಿಸಿಕೊಂಡು ಕೆಲಸ ಶುರು ಮಾಡಬೇಕು. ಇದು ಶಿಕ್ಷಕರದ್ದೇ ಹೊಣೆ ಎಂದು ನಾವು ಹೇಳಿದ್ದೆವು ಎಂದು ತಿಳಿಸಿದ್ದಾರೆ. ಹಾಗೇ, ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿಯೂ ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News