Breaking News :

ವಿಟ್ಲ: ಕೆರೆಗೆ ಜಾರಿ ಬಿದ್ದು ಯುವಕ ಮೃತ್ಯು

ವಿಟ್ಲ; ತೆಂಗಿನಕಾಯಿ ತರಲು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ಆ.27ರ ಮಂಗಳವಾರ ನಡೆದಿದೆ.

ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕ ಅವರ ಪುತ್ರ ನವೀನ್‌ ನಾಯ್ಕ(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನವೀನ್‌ ನಾಯ್ಕ ಅವರು ತೆಂಗಿನಕಾಯಿ ತರಲು ತೋಟಕ್ಕೆ ತೆರಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್

More News