ಮುಡಾ ಅವ್ಯವಹಾರಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಿದ್ದಾಗ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕುರಿತು ಕುರುಬರ ಸಂಘದ ಅಧ್ಯಕ್ಷರಾಗಿರುವ ರವಿಚಂದ್ರನ್, ರಾಜ್ಯಪಾಲರ ವಿರುದ್ಧ ಮಾತನಾಡುವಾಗ ಕುಸಿದು ಬಿದ್ದಿದ್ದಾರೆ. ಇನ್ನು ಅವರನ್ನು ಹತ್ತಿರದ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೋಲಾರದ ಚಿಂತಾಮಣಿ ಮೂಲದ ಸಿ.ಕೆ ರವಿಚಂದ್ರನ್ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಜೊತೆ ಓಡನಾಟ ಹೊಂದಿದ್ದರು. ಜೊತೆಗೆ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಹ ಓಡಾನಾಟ ಹೊಂದಿದ್ದರು.







