Breaking News :

ನದಿಯಲ್ಲಿ ಈಜಲು ತೆರಳಿದ ಯುವಕ ನೀರುಪಾಲು

ನದಿಗೆ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ಘಟನೆ ವಿಜಯಪುರದ ಶ್ರೀ ಛಾಯಾ ಭಗವತಿಯ ತೀರದಲ್ಲಿ ನಡೆದಿದೆ.

ಮಹ್ಮದ್ ಆದಿಲ್(27)ನೀರು ಪಾಲಾದ ಯುವಕನಾಗಿದ್ದು, ವಿಜಯಪುರ ಜಿಲ್ಲೆಯ ತಾಳಿಕೋಟಿಯಿಂದ ಸ್ನೇಹಿತರೊಂದಿಗೆ ಶುಕ್ರವಾರ ಛಾಯಾ ಭಗವತಿ ವೀಕ್ಷಣೆಗೆ ತೆರೀದ್ದ. ಈಜಲು ನದಿಗೆ ಇಳಿದಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ

ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆದಿಲ್ ದೆಹಲಿ ಮೂಲದವರಾಗಿದ್ದು, ತಾಳಿಕೋಟಿಯಲ್ಲಿ ಕಳೆದ ಹಲವು ವರ್ಷಗಳಿಂದ ಕಟಿಂಗ್ ಶಾಪ್ ನಡೆಸುತ್ತಿದ್ದರು. ಆದಿಲ್ ಗೆ ಪತ್ನಿ, ಪುತ್ರ, ಇಬ್ಬರು ಪುತ್ರಿ ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this article

ಟಾಪ್ ನ್ಯೂಸ್

More News