Breaking News :

ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿ ಶೀಟರ್ ಕಾಲಿಗೆ ಗುಂಡೇಟು

ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದ ಬಳಿ ನಡೆದಿದೆ.

ಮುತ್ತುರಾಜು ಎಂಬಾತನ ಮೇಲೆ ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿದ್ದಾರೆ.  ಕೊಲೆ ಪ್ರಕರಣಕ್ಕೆ  ಸಂಬಂಧಿಸಿ ಆರೋಪಿಯನ್ನು ಹಿಡಿಯಲು ಪೊಲೀಸರು ಹೋಗಿದ್ದರು. ಈ ವೇಳೆ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ ಆರೋಪಿಯ ಬಲಗಾಲಿಗೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ರೌಡಿಶೀಟರ್​ ಅನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

Share this article

ಟಾಪ್ ನ್ಯೂಸ್

More News