Breaking News :

ಮಂಗಳೂರು; ಪಬ್ ನಲ್ಲಿ ಮಹಿಳೆಗೆ ನಿಂದನೆ; ಪುತ್ತೂರಿನ ನಾಲ್ವರು ಅರೆಸ್ಟ್

ಮಂಗಳೂರು:  ಪಾಂಡೇಶ್ವರದ ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತ ಆರೋಪಿಗಳು.

ಪಾಂಡೇಶ್ವರದಲ್ಲಿರುವ ಪಬ್‌ಗೆ ಮಹಿಳೆ ತನ್ನ ಗೆಳತಿ ಜತೆ ತೆರಳಿದ್ದರು. ಅಲ್ಲಿ ಪುತ್ತೂರಿನ ಯುವಕರ ತಂಡವೊಂದು ಪಾರ್ಟಿಯಲ್ಲಿ ತೊಡಗಿತ್ತು. ಅವರು ಮಹಿಳೆಗೆ ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

 

Share this article

ಟಾಪ್ ನ್ಯೂಸ್

More News