Breaking News :

ಮಂಗಳೂರು; ಪ್ರತಿಭಟನೆ ವೇಳೆ ಬಸ್ಸಿಗೆ ಕಲ್ಲೆಸೆತ, ಮೂವರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಪಾದಯಾತ್ರೆ ಬಳಿಕ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.

ಜೋಕಟ್ಟೆಯ ನೌಫಾಲ್ ಎಂಬವರಿಗೆ ಸೇರಿದ ಜೋಕಟ್ಟೆಯಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ 2ಸಿ ನಂಬರ್ ನ ಬಸ್ ಗೆ ಕಲ್ಲು ಎಸೆಯಲಾಗಿತ್ತು

 

Share this article

ಟಾಪ್ ನ್ಯೂಸ್

More News