ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ವೆಬ್ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅ.5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಈ ಎಲ್ಲ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು.
ಅಭ್ಯರ್ಥಿಯ ವಯೋಮಿತಿ 18 ರಿಂದ 40 ವರ್ಷದ ಒಳಗಿರಬೇಕು. ಅಂಕಗಳ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.







