Breaking News :

ನನ್ನ ಬಗ್ಗೆ ಬೀದಿ ಬೀದಿಯಲ್ಲಿ ಸುಳ್ಳು ಹಬ್ಬಿಸುತ್ತಿದ್ದಾರೆ, ಇನ್ಮುಂದೆ ಪ್ರತಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ; ಸಿಎಂ ಸಿದ್ದರಾಮಯ್ಯ

ನಾನು ಈಗ ಮೊದಲಿನ ಸಿದ್ದರಾಮಯ್ಯ ಅಲ್ಲ, ನಾನು ಬದಲಾಗುತ್ತೇನೆ. ಇನ್ಮುಂದೆ ಪ್ರತಿ ಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ‌.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಬಗ್ಗೆ ಹೋಗ್ಲಿ ಬಿಡು, ಹೋಗ್ಲಿ ಬಿಡು ಅಂತ ನಾನು ಹೇಳುತ್ತಿದ್ದೆ. ಅದೇ ನನಗೆ ಈಗ ಮುಳ್ಳಾಗುತ್ತಿದೆ. ಪ್ರತಿ ಪಕ್ಷಗಳ ಎಲ್ಲಾ ನಾಯಕರ ಹಳೇ ಪ್ರಕರಣ ತೆರೆಯುತ್ತೇನೆ. ದ್ವೇಷದ ರಾಜಕಾರಣ ಅಂದರೂ ಪರವಾಗಿಲ್ಲ. ನಾನು ಇನ್ಮುಂದೆ ತಲೆಕೆಡಿಸಿಕೊಳ್ಳುವುದಿಲ್ಲ  ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಪ್ಪೇ ಮಾಡದ ನನ್ನ ಮೇಲೆ ಬೀದಿ ಬೀದಿ ಸುತ್ತಿಕೊಂಡು ಸುಳ್ಳು ಹಬ್ಬಿಸಿ ನನ್ನ ಹೆಸರು ಕೆಡಿಸುತ್ತಿದ್ದಾರೆ. ಈ ವಿಚಾರದಲ್ಲಿ ನಾನಿನ್ನು ತಾಳ್ಮೆಯಾಗಿರಲ್ಲ. ಯಾರೇ ಬಂದು ಏನೇ ಒತ್ತಡ ಹೇರಿದರೂ ನಾನು ಇನ್ಮೇಲೆ ಪ್ರತಿ ಪಕ್ಷಗಳ ವಿಚಾರದಲ್ಲಿ ತಾಳ್ಮೆಯಾಗಿರುವುದಿಲ್ಲ ಎಂದು ಹೇಳಿದ್ದಾರೆ.

Share this article

ಟಾಪ್ ನ್ಯೂಸ್

More News