Breaking News :

ರಾಹುಲ್ ಗಾಂಧಿಯ ರಾಜಕೀಯ ಶೈಲಿಯಲ್ಲಿ ಬದಲಾವಣೆಯಾಗಿದೆ; ರಾಹುಲ್ ಗಾಂಧಿಯನ್ನು ಹೊಗಳಿ ಸ್ಮೃತಿ ಇರಾನಿ ಏನೆಲ್ಲಾ ಹೇಳಿದ್ರು? ಡಿಟೇಲ್ಸ್…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಯಶಸ್ಸಿನ ಹೊಸ ಹೊಸ ರಾಜಕೀಯ ತಂತ್ರಗಾರಿಕೆಯನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದು, ಈ ಕುರಿತ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದೆ.

‘ಟಾಪ್‌ ಆಯಂಗಲ್’ ಪಾಡ್‌ಕಾಸ್ಟ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸ್ಮೃತಿ ಇರಾನಿ, ‘ಜಾತಿ ವ್ಯವಸ್ಥೆ ಬಗ್ಗೆ ಮಾತನಾಡುವುದು, ಪ್ರಚೋದಕಾರಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಅವರ ಹೊಸ ತಂತ್ರಗಾರಿಕೆಯ ಭಾಗವಾಗಿದೆ. ಅವರು ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದ್ದು, ನಿರ್ದಿಷ್ಟ ಸಮುದಾಯಗಳನ್ನು ಸೆಳೆಯುವಲ್ಲಿ ಯಶಸ್ಸಿಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರ ಕೆಲಸಗಳನ್ನು ಲಘುವಾಗಿ ಪರಿಗಣಿಸುವುದು ತಪ್ಪು. ಅದು ಒಳ್ಳೆದು, ಕೆಟ್ಟದು ಅಥವಾ ಅಪಕ್ವತೆಯಿಂದ ಕೂಡಿರಲಿ. ಅವು ವಿಭಿನ್ನ ರಾಜಕೀಯ ತಂತ್ರಗಾರಿಕೆಯನ್ನು ಪ್ರತಿನಿಧಿಸುತ್ತವೆ.



ಜಾತಿ ಬಗ್ಗೆ ಮಾತನಾಡುವಾಗ, ಸಂಸತ್ತಿಗೆ ಬಿಳಿ ಟಿ-ಶರ್ಟ್ ಧರಿಸಿ ಬರುವಾಗ ಅದು ದೇಶದ ಯುವಜನತೆಗೆ ಯಾವ ರೀತಿಯ ಸಂದೇಶ ನೀಡುತ್ತದೆ ಎಂಬ ಅರಿವು ರಾಹುಲ್ ಅವರಿಗಿದೆ. ಮಿಸ್‌ ಇಂಡಿಯಾ’ ಸ್ಪರ್ಧೆ ಕುರಿತ ರಾಹುಲ್ ಹೇಳಿಕೆಯನ್ನು ಪ್ರಸ್ತಾಪಿಸಿ ಮಾತನಾಡಿದ ಇರಾನಿ, ‘ಮಿಸ್ ಇಂಡಿಯಾ ಸ್ಪರ್ಧೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಹುಲ್ ಗಾಂಧಿಗೆ ಗೊತ್ತಿದೆ. ಆದರೂ ಅಂತಹ ಸ್ಪರ್ಧೆಗಳಲ್ಲಿ ದಲಿತರು/ಆದಿವಾಸಿಗಳಿಗೆ ಸರಿಯಾದ ಪ್ರಾತಿನಿಧ್ಯತೆ ಸಿಗುತ್ತಿಲ್ಲ ಎಂದು ಹೇಳುತ್ತಾರೆ. ಇಂತಹ ಹೇಳಿಕೆಗಳ ಮೂಲಕ ಗಮನ ಸೆಳೆಯಲು ಪ್ರಯತ್ನಿಸುತ್ತಾರೆ. ಇದೇ ಅವರ ತಂತ್ರಗಾರಿಕೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ದೇಶದ ಹಿಂದೂಗಳನ್ನು ಓಲೈಸಲು ಪ್ರಯತ್ನಿಸಿದರು. ಆದರೆ ಆ ತಂತ್ರಗಾರಿಕೆ ಕೆಲಸ ಮಾಡಲಿಲ್ಲ. ಯಾವಾಗ ಆ ತಂತ್ರಗಾರಿಕೆ ಫಲಿಸಲಿಲ್ಲವೋ ಆಗ ಅವರು ಜಾತಿ ಸಮಸ್ಯೆಯ ಬಗ್ಗೆ ಮಾತನಾಡಲು ಶುರು ಮಾಡಿದರು ಎಂದು ಹೇಳಿದರು.

Share this article

ಟಾಪ್ ನ್ಯೂಸ್

More News