Breaking News :

ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆ

ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ.

ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.

ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಮತ್ತು ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this article

ಟಾಪ್ ನ್ಯೂಸ್

More News