Breaking News :

ಟಿಪ್ಪರ್ ಲಾರಿ ಹರಿದು ಗರ್ಭಿಣಿ ಸಾವು; ಭೀಕರ ಅಪಘಾತಕ್ಕೆ ಗರ್ಭಿಣಿಯ ಹೊಟ್ಟೆಯಿಂದ ಹೊರ ಬಂದ ಮಗು

ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ನಡೆದಿದೆ.

ಎಡೇಹಳ್ಳಿ ಗ್ರಾಮದ ಸಿಂಚನ (30) ಮೃತರು. ಸಿಂಚನಾ ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಹರಿದ ಪರಿಣಾಮ ಅವರ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this article

ಟಾಪ್ ನ್ಯೂಸ್

More News