Breaking News :

ಉಡುಪಿ ಬಸ್ ನಲ್ಲಿ ಯುವತಿ ಅಸ್ವಸ್ಥ; ಬಸ್ ನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಮಾನವೀಯತೆ ಮೆರೆದ ಸಿಬ್ಬಂದಿಗಳು

ಉಡುಪಿ: ಬಸ್ ನಲ್ಲಿ ತೆರಳುತ್ತಿರುವಾಗ ಯುವತಿಯೋರ್ವಳು ಅಸ್ವಸ್ಥಗೊಂಡಿದ್ದು, ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ನ್ನು ಆಸ್ಪತ್ರೆಗೆ ಕೊಂಡೊಯ್ದ ಘಟನೆ ಉಡುಪಿ ನಗರದಲ್ಲಿ  ನಡೆದಿದೆ.

ಶಿರ್ವದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ  ಯುವತಿ ಅಸ್ವಸ್ಥಳಾಗಿದ್ದು, ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತಕ್ಷಣ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಎಚ್ಚೆತ್ತು ಬಸ್ ನ್ನು ನೇರ ಆಸ್ಪತ್ರೆಗೆ ಸಾಗಿಸಿದ್ದಾರೆ.

ಯುವತಿಗೆ ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಯುವತಿಯ ಮನೆಯವರಿಗೆ ಮಾಹಿತಿ ನೀಡಲಾಗಿದೆ.

 

Share this article

ಟಾಪ್ ನ್ಯೂಸ್

More News